ರೈಟ್ ರೈಟ್ … ಫೈನ್ ಬಿದ್ದರೂ ನಿಲ್ಲದ ನೋಟ್ಬುಕ್ ಸೆಲೆಬ್ರೇಷನ್ ಆಲ್ರೈಟ್ ಅಂತಾರೆ ದಿಗ್ವೇಶ್….

ಬಿಸಿಸಿಐ ದಿಗ್ವೇಶ್ ರಾಥಿಯವರಿಗೆ ಮೊದಲನೇ ಬಾರಿಗೆ,ತಮ್ಮ ಪಂದ್ಯ ಶುಲ್ಕದ ಶೇಕಡ 25ರಷ್ಟು ದಂಡ ವಿಧಿಸಿದರು, ಎರಡನೆಯದಾಗಿ ತಮ್ಮ ಪಂದ್ಯ ಶುಲ್ಕದ ಶೇಕಡ 50ರಷ್ಟು ದಂಡ ವಿಧಿಸಿದ್ದರು. ಅದಾಗಿಯೂ ಸಹ ದಿಗ್ವೇಶ್ ರಾಥಿ ತಮ್ಮ ನೋಟ್ಬುಕ್ ಸೆಲೆಬ್ರೇಶನ್ ಅನ್ನ ಮುಂದುವರಿಸಿದ್ದಾರೆ. ಎಲ್ ಎಸ್ ಟಿ ತಂಡದ ಅಭಿಮಾನಿಗಳಿಗೆ ಇದು ಸಂತಸ ನೀಡಿದರಾದರು, ಇವರು ಫೈನ್ ಕಟ್ಟಲೇಬೇಕು. ಇನ್ನು ಕೆಲ ಕ್ರಿಕೆಟ್ ಅಭಿಮಾನಿಗಳು ಫೈನ್ ಕಟ್ಟುವುದಾದರೆ ಇಂತಹ ಸೆಲೆಬ್ರೇಶನ್ ಗಳನ್ನು ಯಾಕೆ ಮಾಡಬೇಕು ಎಂದು ಸಮ್ಮಿಶ್ರ ಪ್ರತಿಕ್ರಿಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ನೋಟ್ಬುಕ್ ಸೆಲೆಬ್ರೇಷನ್ ಮುಂದುವರೆದಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್ ಬುಕ್ ಸೆಲೆಬ್ರೇಷನ್ನೊಂದಿಗೆ ದಿಗ್ವೇಶ್ ರಾಥಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.ಇದೀಗ ಮತ್ತೆ ನೋಟ್ಬುಕ್ ಸೆಲೆಬ್ರೇಷನ್ನೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಬೀಳ್ಕೊಡುಗೆ ನೀಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ವಿಕೆಟ್ ಪಡೆದ ದಿಗ್ವೇಶ್ ಎಂದಿನಂತೆ ನೋಟ್ಬುಕ್ ಸಹಿಯೊಂದಿಗೆ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್ಗಳ ಜಯ ಸಾಧಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು