ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊನ್ನೆ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳ ಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆ ಯ ಮೇರುಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!