ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ

ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡದ ಕೆಜಿಎಫ್-2​ ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್​-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2​ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.

ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯ ಅಮೋಘವಾಗಿತ್ತು. ಅತ್ಯುತ್ತಮ ನಟ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಕಾಂತಾರ ಖ್ಯಾತಿಯ ರಿಷಬ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!