ಕಾಂಗ್ರೆಸ್ ನಾಯಕರು ದೇಶದ ಜೊತೆ ನಿಲ್ಲಬೇಕಿತ್ತು ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಬೆಂಗಳೂರು : ಅಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆಯೇ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ರಕ್ತ ದೇಶ ವಿರೋಧಿ ರಕ್ತ. ಅಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್ ನವರು ಜೋಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದೇಶದ ಜೊತೆ. ನಿಲ್ಲಬೇಕಿತ್ತು. ಸೇನೆಗೆ ಅವರ ಬೆಂಬಲ ಕೊಡಬೇಕಿತ್ತು. ಇಲ್ಲವೇ ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡು ಇರಬೇಕಿತ್ತು. ಪಾಕ್ ಸರ್ಕಾರ ಉಗ್ರರ ಕುಟುಂಬಗಳಿಗೆ ಪರಿಹಾರ ಕೊಟ್ಟಿದೆ. ಇದನ್ನು ನೋಡಿಯಾದರೂ ಕಾಂಗ್ರೆಸ್ ನವರು ಸುಮ್ಮನಿರಬೇಕಿತ್ತು ದೇಶಕ್ಕೆ ಸಂಕಷ್ಟ ಬಂದಾಗ ಕಾಂಗ್ರೆಸ್ ದೇಶದ ಜೊತೆ ನಿಲ್ಲಲ್ಲ ಕಾಂಗ್ರೆಸ್ ನಾಯಕ ವಿದೇಶಕ್ಕೆ ಹೋಗಿ ಭಾರತದ ವಿರುದ್ದ ಮಾತನಾಡುತ್ತಾರೆ. ಕೇಂದ್ರ ಸರ್ಕಾರವನ್ನ ತೆಗೆಯುವುದು ಹೇಗೆ ಎಂದು ಚರ್ಚಿಸುತ್ತಾರೆ. ಕಾಂಗ್ರೆಸ್ ಮಾನಸಿಕತೆ ದೇಶದ ಜನರಿಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಮಂಜುನಾಥ್ ನಾಲಿಗೆಗೂ ಮೆದಳಿಗೂ ಸಂಪರ್ಕ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇಂತವರು ಹಲವರಿದ್ದಾರೆ. ಕೆಲವರು ಟೋಪಿಯನ್ನ ಉಲ್ಟಾ ಹಾಕಿಕೊಳ್ಳುತ್ತಾರೆ ಎಂದು ಟೀಕಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!