RCB ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

ಬೆಳಗಾವಿ : ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸಿದ ಆರ್ಸಿಬಿ ತಂಡ ಭರ್ಜರಿಯಾಗಿ ಫೈನಲ್ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ ನಮ್ದೇ ಅನ್ನೋ ಮಹಾ ಸಂದೇಶ ರವಾನಿಸಲು ಮುಂದಾಗಿರುವ ಈ ಸಂದರ್ಭದಲ್ಲಿ ಓರ್ವ ಅಭಿಮಾನಿ ಆರ್ಸಿಬಿ ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ ಒಂದು ದಿನ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್ಸಿಬಿ ಅಭಿಮಾನಿಯಾಗಿದ್ದು, ಆರ್ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್ಸಿಬಿ ಫೈನಲ್ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪತ್ರದಲ್ಲೇನಿದೆ?


ಐಪಿಎಲ್ ಪಂದ್ಯದಲ್ಲಿ ಒಂದು ವೇಳೆ ಆರ್ಸಿಬಿ ತಂಡ ಫೈನಲ್ಗೆ ಹೋಗಿ ಕಪ್ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್ಸಿಬಿ ಫ್ಯಾನ್ಸ್ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು. ಏಕೆಂದರೆ ಆರ್ಸಿಬಿ ಫ್ಯಾನ್ಸ್ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ.
ಇದನ್ನು ಕರ್ನಾಟಕ ಸರ್ಕಾರ ಗಣನೀಯವಾಗಿ ತೆಗೆದುಕೊಂಡು ರಜೆ ಮತ್ತು ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಪರವಾಣಿಗೆ ಕೊಡಬೇಕೆಂದು ಎಲ್ಲಾ ಆರ್ಸಿಬಿ ಫ್ಯಾನ್ಸ್ ಪರವಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳುತ್ತೇವೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ