ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!