RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಈ ಮಧ್ಯೆ ಇಂದು ಆರ್ ಸಿಬಿ ಫೈನಲ್ ಪಂದ್ಯ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡರೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಜೋರಾಗಿರುತ್ತದೆ. ಹೀಗಾಗಿಯೇ RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಆರ್ ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ನಿರ್ದೇಶನ ನೀಡಿದ್ದಾರೆ.
ಆರ್ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ. ರಸ್ತೆ ತಡೆಯುವುದು, ಟೈರ್ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಈ ಬಗ್ಗೆ ನಿಗಾ ವಹಿಸುವಂತೆ ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್ ಅಳವಡಿಕೆ ಮಾಡುವಂತಿಲ್ಲ ಎಂದು ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ. ಹಾಗೆಯೇ ಪಬ್, ಕ್ಲಬ್, ರೆಸ್ಟೋರೆಂಟ್ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!