ಕೇವಲ 180 ಮೀಟರ್‌ ಹತ್ತಿರದಲ್ಲಿರುವ ಮನೆಗೆ ಟ್ಯಾಕ್ಸಿ ಬುಕ್ ಮಾಡಿದ ಯುವತಿ; ಕಾರಣ ಕೇಳಿದರೆ ಶಾಕ್ ಆಗ್ತೀರಾ!!!

ಮನುಷ್ಯರು ಎಲ್ಲದರಲ್ಲೂ ಸುಲಭವಾದುದ್ದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಈಕೆ ಈ ನಿರ್ಧಾರವನ್ನು ಏಕೆ ತೆಗೆದುಕೊಂಡಳು ಎಂಬ ಕಾರಣವನ್ನು ಕೇಳಿದರೆ ನೀವು ಖಂಡಿತವಾಗಿಯೂ ಶಾಕ್ ಆಗ್ತಿರಾ.ಹೋಗುವ ಸ್ಥಳಕ್ಕೆ 5 ರಿಂದ 10 ನಿಮಿಷದಲ್ಲಿ ತಲುಪುತ್ತೇವೆ ಎಂದಾದ್ರೆ ಜನ ಟ್ಯಾಕ್ಸಿ ದುಡ್ಡು ಉಳಿಸುವ ಸಲುವಾಗಿ ಕಾಲ್ನಡಿಗೆಯಲ್ಲೇ ಆ ಸ್ಥಳಕ್ಕೆ ಹೋಗ್ತಾರೆ. ಆದ್ರೆ ಇಲ್ಲೊಂದು ಅದಕ್ಕೆ ತದ್ವಿರುದ್ಧವಾದ ಘಟನೆ ನಡೆದಿದ್ದು, 180 ಮೀಟರ್ ಕ್ರಮಿಸಲು ಅಂದ್ರೆ ಕೇವಲ 2 ನಿಮಿಷದ ದಾರಿಗೆ ಯುವತಿಯೊಬ್ಬಳು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಬೀದಿ ನಾಯಿಗಳ ಹಾವಳಿಗೆ ಹೆದರಿ ಆಕೆ ಮನೆಗೆ ತಲುಪಲು ಕೇವಲ 2 ನಿಮಿಷದ ದಾರಿಯಿದ್ದರೂ ಟ್ಯಾಕ್ಸಿ ಬುಕ್ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ಘಟನೆ ದೆಹಲಿಯಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಗೆ ಹೆದರಿ ಯುವತಿಯೊಬ್ಬಳು ರೈಡ್-ಹೀಲಿಂಗ್ ಆಪ್ಲಿಕೇಶನ್ ಮೂಲಕ ಬರೀ 180 ಮೀ. ಕ್ರಮಿಸಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಕೇವಲ 2 ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದನ್ನು ಕಂಡು ರೈಡರ್ ಶಾಕ್ ಆಗಿದ್ದು, ಇದು ಸರಿಯಾದ ವಿಳಾಸ ತಾನೇ ಎಂದು ಕೇಳಿದ್ದಾನೆ. ಬೀದಿನಾಯಿಗಳ ಹಾವಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಾನು ಎರಡು ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಆ ಯುವತಿ ಹೇಳಿಕೊಂಡಿದ್ದು, ಆಕೆಯ ಕಾರಣ ಕೇಳಿ ರೈಡರ್ ನಸು ನಕ್ಕಿದ್ದಾನೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬೈಕ್ ಟ್ಯಾಕ್ಸಿ ರೈಡರ್ ಕೇವಲ 180 ಮೀ. ದೂರ ಕ್ರಮಿಸಲು ಟ್ಯಾಕ್ಸಿ ಬುಕ್ ಮಾಡಿದ್ದಾ, ಲೊಕೇಷನ್ ಸರಿಯಾಗಿದೆ ತಾನೇ ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು. ಆಗ ಆ ಯುವತಿ ಬೀದಿ ನಾಯಿಗಳೆಂದರೆ ನನಗೆ ತುಂಬಾ ಭಯ, ಅದಕ್ಕಾಗಿ ನಾನು 2 ನಿಮಿಷಗಳ ದಾರಿಗೂ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಹೇಳಿಕೊಂಡಿದ್ದಾಳೆ. ಈ ಕಾರಣ ಕೇಳಿ ಟ್ಯಾಕ್ಸಿ ರೈಡರ್ ನಸು ನಕ್ಕಿದ್ದು, ನಂತರ ಸೇಫ್ ಆಗಿ ಆಕೆಯನ್ನು ಮನೆಗೆ ಬಿಟ್ಟು ಬಂದಿದ್ದಾನೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು