ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಣೆ; ಯಾರಾಗಲಿದ್ದಾರೆ ಈ ಬಾರಿಯ ಚಾಂಪಿಯನ್ಸ್….

ಐಸಿಸಿ 2026ರ ಮಹಿಳಾ ಟಿ20 ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂನ್ 12ರಿಂದ ಜುಲೈ 5ರವರೆಗೆ ನಡೆಯುವ ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಪರ್ಧಿಸಲಿವೆ. ಜೂನ್ 14ರಂದು ಎಡ್ಜ್‌ಬಾಸ್ಟನ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಒಟ್ಟು 12 ತಂಡಗಳು ಎರಡು ಗುಂಪುಗಳಾಗಿ ವಿಭಜನೆಯಾಗಿವೆ. ಕೆಲವು ದಿನಗಳ ಹಿಂದೆ ಮಹಿಳೆಯರ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ್ದ ಐಸಿಸಿ, ಇದೀಗ ಮುಂದಿನ ವರ್ಷ ಅಂದರೆ 2026 ರಲ್ಲಿ ನಡೆಯಲ್ಲಿರುವ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಪ್ರಕಟಗೊಂಡಿರುವ ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿ ಜೂನ್ 12 ರಂದು ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ವೇಳಾಪಟ್ಟಿಯಲ್ಲಿನ ದೊಡ್ಡ ಸುದ್ದಿಯೆಂದರೆ ಭಾರತ ಮತ್ತು ಪಾಕಿಸ್ತಾನ ಈ ಪಂದ್ಯಾವಳಿಯಲ್ಲಿ ಒಂದೇ ಗುಂಪಿನಲ್ಲಿವೆ. ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಯಾವಾಗ ಮುಖಾಮುಖಿಯಾಗುತ್ತವೆ ಮತ್ತು ಈ ಎರಡೂ ತಂಡಗಳು ಎಷ್ಟು ಬಾರಿ ಮುಖಾಮುಖಿಯಾಗಬಹುದು ಎಂಬುದರ ವಿವರ ಇಲ್ಲಿದೆ.

2026 ರ ಮಹಿಳಾ ಟಿ20 ವಿಶ್ವಕಪ್‌ನ ಮಹತ್ವದ ಪಂದ್ಯವು ಭಾರತ ಮತ್ತು ಪಾಕಿಸ್ತಾನ ನಡುವೆ ಜೂನ್ 14 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸುತ್ತಿದ್ದು, ತಲಾ 6 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಂತೆ ಭಾರತ ಮತ್ತು ಪಾಕಿಸ್ತಾನ ಜೊತೆಗೆ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಎರಡು ಅರ್ಹತಾ ತಂಡಗಳು ಗುಂಪು 1 ರಲ್ಲಿ ಸ್ಥಾನ ಪಡೆದಿದ್ದರೆ, ಗುಂಪು 2 ರಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಎರಡು ಅರ್ಹತಾ ತಂಡಗಳು ಸೇರಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!