ಆಂಗ್ಲರ ನಾಡಿನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಪಾತ್ರ ನಿರ್ಣಾಯಕ….

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ . ಈಗಾಗಲೇ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್ಆರ್ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್ಗಳಿಸಿದ್ದಾರೆ .ಈ 18 ಇನಿಂಗ್ಸ್ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!