ಮೈಸೂರು ಅಂಬಾರಿ ಹೊರುತ್ತಿದ್ದ ‘ಅರ್ಜುನಾ ಸ್ಮಾರಕ’ ಜೂ. 23ರಂದು ಲೋಕಾರ್ಪಣೆ.

ಬೆಂಗಳೂರು : ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು.

ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದ ಸಚಿವ ಈಶ್ವರ್ ಖಂಡ್ರೆ ಅವರು ದಬ್ಬಳ್ಳಿಕಟ್ಟೆಯಲ್ಲಿ ಮತ್ತು ಅರ್ಜುನ ವಾಸವಾಗಿದ್ದ ಬಳ್ಳೆ ಶಿಬಿರದಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದ್ದರು. ಈಗ ಎರಡೂ ಕಡೆ ಸ್ಮಾರಕ ಸಿದ್ಧವಾಗಿದ್ದು, ಸೋಮವಾರ ಬಳ್ಳೆಯಲ್ಲಿ ಮೊದಲಿಗೆ ಸ್ಮಾರಕದ ಉದ್ಘಾಟನೆ ನೆರವೇರಲಿದೆ.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಗಿತ್ತು. ಅಲ್ಲಿ ಪಳಗಿದ ನಂತರ, 1990ರ ದಶಕದಿಂದ ಮೈಸೂರಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದ ಅರ್ಜುನ 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ಜನಮನ ಗೆದ್ದಿದ್ದ. ಅರ್ಜುನ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!