ಹಾಸನದಲ್ಲಿ ಮತ್ತಿಬ್ಬರು ಹೃದಯಾಘಾತಕ್ಕೆ ಬ*ಲಿ: ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ!

ಹಾಸನ : ಹಾಸನ ಮೂಲದ ಯುವಕ-ಯುವತಿಯರು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

32 ವರ್ಷದ ಆಟೋ ಚಾಲಕ ಸಾ*ವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

22 ವರ್ಷದ ಯುವತಿ ಹೃದಯಾಘಾತಕ್ಕೆ ಬ*ಲಿ
ಮಧ್ಯಾಹ್ನ ಹಾಸನ ಮೂಲದ ಆಟೋ ಚಾಲಕ ಯೋಗೇಶ್ ಮೃತಪಟ್ಟಿದ್ದರೆ, ಸಂಜೆ ಹಾಸನ ಮೂಲದ ಕಟ್ಟಳ್ಳಿಯ ಕೃಷ್ಣಮೂರ್ತಿ, ರೂಪಾ ದಂಪತಿ ಪುತ್ರಿ ಸುಪ್ರಿಯಾ(22) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದ ಸುಪ್ರಿಯಾ ಕುಟುಂಬ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು, ಸುಪ್ರಿಯಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದಳು. ವಿದ್ಯಾಭ್ಯಾಸದ ಜೊತೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದ್ರೆ, ನಿನ್ನೆ (ಜೂನ್ 25) ಮನೆಯಲ್ಲಿ ಸುಪ್ರಿಯಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾಳೆ. ಕೂಡಲೇ ಪೋಷಕರು, ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ದುರದೃಷ್ಟವಶಾತ್, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸುಪ್ರಿಯಾ ಮೃತಪಟ್ಟಿದ್ದಾಳೆ.

ಒಂದೇ ತಿಂಗಳಲ್ಲಿ 14 ಜನರು ಹೃದಯಾಘಾತಕ್ಕೆ ಬ*ಲಿ
ಕಳೆದೊಂದು ತಿಂಗಳ ಹೃದಯಾಘಾತ ಮಾಹಿತಿ ನೋಡಿದರೆ, ಇವರೆರೆಡು ಸೇರಿ ಕಳೆದ ಒಂದು ತಿಂಗಳ ಅವಧಿಯಲ್ಲಿ 14ನೇ ಸಾವು. ಮೇ 20ರಂದು ಅರಕಲಗೂಡು ತಾಲೂಕಿನ ಅಭಿಷೇಕ್, ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂಧ್ಯಾ ಸಾವನ್ನಪ್ಪಿದ್ದರು. ಮೇ 28ರಂದು ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಆನಂತರ ಜೂನ್ 11ರಂದು ಹೊಳೆನರಸೀಪುರದ ಯುವಕ ನಿಶಾಂತ್ ಸಾವು, ಜೂನ್ 12ರಂದು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾರಿಗೆ ಸಿಬ್ಬಂದಿ ನಾಗಪ್ಪ ಸಾವು, ಅದೇ ದಿನ ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ ಮೃತಪಟ್ಟಿದ್ದರು.
ಇನ್ನು ಜೂನ್ 13ರಂದು ಚನ್ನರಾಯಪಟ್ಟಣದ ಗ್ರಾಮ ಲೆಕ್ಕಿಗ ದೇವರಾಜ್ ಎಂಬುವರು ಕಾರಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದರು. ಅದೇ ದಿನ ಸತೀಶ್ ಎಂಬುವರು ಹಠಾತ್ ಸಾವಿಗೀಡಾಗಿದ್ದರು. ಜೂನ್ 14ರಂದು ಕಾಂತರಾಜು ಮೃತಪಟ್ಟದ್ದರೆ, ಜೂನ್ 18ರಂದು ಅರಸೀಕೆರೆ ಮೂಲದ ಶಿರಾದಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ನೌಕರ ನವೀನ್ ಸಾವನ್ನಪ್ಪಿದ್ದರು. ಜೂನ್ 21ರಂದು ಬೇಲೂರಿನ ನಿಶಾದ್ ಅಹ್ಮದ್ ಹಾಗೂ ಹಾಸನ ಮೂಲದ ಚೇತನ್ ಹೃದಯಾಘಾತಕ್ಕೆ ಬಲಿಯಾಗಿದ್ದರು.

2 ವರ್ಷಗಳಲ್ಲಿ 507 ಜನರಿಗೆ ಹೃದಯಾಘಾತ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರಿಗೆ ಹೃದಯಾಘಾತವಾಗಿದೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರಿಗೆ ಹೃದಯಾಘಾತವಾಗಿದ್ದು, ಈ ಪೈಕಿ ಎರಡು ವರ್ಷಗಳಲ್ಲಿ ಒಟ್ಟು 140 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ದುಶ್ಚಟ, ಅಸಮತೊಲನದ ಅಹಾರ ಸೇವನೆ ಹಾಗೂ ಜೀವನ ಶೈಲಿಯಿಂದಲೇ ಹೃದಯಘಾತ ಸಂಭವಿಸುತ್ತಿವೆ ಎಂದು ಸ್ವತಃ ಹಾಸನ ಡಿಹೆಚ್ ಓ ಡಾ ಅನಿಲ್ ಮೊನ್ನೆ ಅಷ್ಟೇ ಮಾಹಿತಿ ನೀಡಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!