ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….

ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ ಆಗಿರುತ್ತದೆ. ಈ ನಿಯಮ ಜುಲೈ 2 ರಿಂದ ಜಾರಿಗೆ ಬರುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳ ಪವರ್ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್ನ ಓವರ್ಗಳನ್ನು ಕಡಿಮೆ ಮಾಡಿದರೆ, ಪವರ್ಪ್ಲೇ ಓವರ್ಗಳನ್ನು ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್ಗಳ ಇನ್ನಿಂಗ್ಸ್ನಲ್ಲಿ ಮೊದಲ 6 ಓವರ್ಗಳು ಪವರ್ಪ್ಲೇ ಆಗಿದ್ದವು. ಈ 6 ಓವರ್ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್ಗಳನ್ನು ಇರಿಸುವಂತಿಲ್ಲ. ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್ಗಳನ್ನು ನಿಲ್ಲಿಸಬಹುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!