ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು

ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ. ಈ ಕುರಿತಾಗಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳು ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಶನಿವಾರ ಹಸು ಮೇಯಲು ಹೋಗಿದ್ದಾಗ ಕೃತ್ಯವೆಸಗಿ ವಿಕೃತಿ ಮೆರೆದಿದ್ದಾರೆ. ಸ್ಥಳೀಯರ ಸಹಾಯದಿಂದ ಹಸುವನ್ನು ಮನೆಗೆ ಕರೆತಂದ ವಿಜಯಕುಮಾರ್, ಚಿಕಿತ್ಸೆ ನೀಡಿದ್ದಾರೆ.

ಇತ್ತ ಇತ್ತೀಚೆಗೆ ಜಿಲ್ಲೆಯಲ್ಲಿ ಹಸುಗಳ ಮಾರಣ ಹೋಮ ನಡೆದಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಭದ್ರಾವತಿಯ ಹಳೆ ಸಿಗೇಬಾಗಿ ನದಿಯ ತಟದಲ್ಲಿ ರಾಶಿರಾಶಿ ಗೋವಿನ ಮೂಳೆ, ಕೊಂಬು ಪತ್ತೆಯಾಗಿದ್ದವು. ಉದ್ದೇಶ ಪೂರ್ವಕವಾಗಿ ನದಿಗೆ ಗೋವಿನ ತ್ಯಾಜ್ಯ ಎಸೆಯಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಕೇಸ್ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಮೂಕ ಪ್ರಾಣಿ ಮೇಲೆ ದುಷ್ಕರ್ಮಿಗಳು ಕೌರ್ಯ ಎಸಗಿದ್ದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆಯನ್ನೇ ಕಡೆಯಲಾಗಿತ್ತು. ಹೊಟ್ಟೆಯೊಳಗಿದ್ದ ಕರುವನ್ನ ಹೊರತೆಗೆದು ಹಸುವಿನ ದೇಹ ಎತ್ಕೊಂಡು ಹೋಗಿದ್ದರು. ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಾಲಿನ ಡೈರಿ ಅಧ್ಯಕ್ಷರಿಗೆ ಸೇರಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!