ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಪರೋಕ್ಷವಾಗಿ ಪಕ್ಷದ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿರುವ ಬೆನ್ನಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.

ನಂದಿಬೆಟ್ಟದಲ್ಲಿ ಜರುಗಿದ ಸಚಿವ ಸಂಪುಟ ಸಭೆಗೂ ಮುನ್ನ ಬೋಗ ನಂದೀಶ್ವರ ದೇವಸ್ಥಾನದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಬಂಡೆ ರೀತಿ ಇರುತ್ತದೆ ಎಂದು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದರು. ಪತ್ರಿಕಾಗೋಷ್ಠಿ ಮುಗಿಯುವ ಹಂತಕ್ಕೆ ಬಂದ ಸಂದರ್ಭದಲ್ಲಿ, ನನ್ನ ನೇತೃತ್ವದಲ್ಲೇ ಕಾಂಗ್ರೆಸ್ ಆಡಳಿತಾವಧಿ ಪೂರ್ಣಗೊಳ್ಳುತ್ತದೆ. ನಾನೇ ಮುಖ್ಯ ಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.

ನಾಯಕತ್ವ ವಿಚಾರವಾಗಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ತಮ್ಮ ಅಧಿಕಾರಾವಧಿ ಮತ್ತು ಸರ್ಕಾರದ ಅಧಿಕಾರಾವಧಿ ಬಗ್ಗೆ ಮಾತನಾಡಲು ಬಿಜೆಪಿ ನಾಯಕರು ಯಾರು? ಎಂದು ಪ್ರಶ್ನಿಸಿದರು. ಆ ಪಕ್ಷದ ಆರ್.ಅಶೋಕ್, ವಿಜಯೇಂದ್ರ ನಮ್ಮ ಹೈಕಮಾಂಡ, ನಾನು ಮುಖ್ಯ ಮಂತ್ರಿಯಾಗಿ ಐದು ವರ್ಷ ಐದು ವರ್ಷವೂ ನಾನೇ ಸಿಎಂ!
ಪೂರ್ಣಗೊಳಿಸುವ ಬಗ್ಗೆ ಅವರಿಗೇಕೆ ಅನುಮಾನ ಎಂದು ಕೇಳಿದ ಅವರು, ಇದರಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು, ಅವರ ಮಾತುಗಳಿಗೆ ಯಾವುದೇ ಮಾನ್ಯತೆ ಕೊಡುವುದು ಬೇಡ, ಅವರು ನಾಲ್ಕು ವರ್ಷ ಆಡಳಿತ ನೀಡಿ, ಯಾವ ಸಾಕ್ಷಿಯ ಗುಡ್ಡೆ ಬಿಟ್ಟು ಹೋಗಿದ್ದಾರೆ ಎಂದು ಕೇಳಿದರು. ನೀರಾವರಿ, ಲೋಕೋಪಯೋಗಿ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಯಾವ ಇಲಾಖೆಯಲ್ಲಿ ಇವರು ಸಾಧನೆ ಮಾಡಿದ್ದಾರೆ. ಇವರಿಗೆ ದೊರೆತ ಅವಕಾಶದಲ್ಲಿ ವ್ಯಾಪಕ ಅಕ್ರಮ, ಭ್ರಷ್ಟಾಚಾರ ನಡೆಸಿದ್ದಷ್ಟೇ ಇವರ ಸಾಧನೆ. ಅದನ್ನು ಮುಚ್ಚಿಕೊಳ್ಳಲು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆಪಾದಿಸಿದರು.





