ಕನ್ನಡದ ಬಗ್ಗೆ ವಿವಾದ ಹೇಳಿಕೆ ; ಕಮಲ್ ಹಾಸನ್ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್!

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದ ಇನ್ನೂ ಕಡಿಮೆ ಆಗಿಲ್ಲ. ಅವರ ಬಗ್ಗೆ ಕೋರ್ಟ್ನಲ್ಲಿ ಕೇಸ್ಗಳು ನಡೆಯುತ್ತಲೇ ಇವೆ. ಈಗ ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕಮಲ್ ಹಾಸನ್ಗೆ ಕೋರ್ಟ್ ನಿರ್ಬಂಧ ಹೇರಿದೆ. ಒಂದೊಮ್ಮೆ ಅವರು ಆದೇಶ ಮೀರಿದರೆ ನ್ಯಾಯಾಂಗ ನಿಂದನೆ ಮಾಡಿದಂತೆ ಆಗುತ್ತದೆ.

 

 

 

 

 

 

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ಪ್ರಚಾರದ ವೇಳೆ ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದಿದ್ದರು. ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಸಿನಿಮಾ ರಿಲೀಸ್ ಆಗಲು ಕರ್ನಾಟಕದಲ್ಲಿ ಅವಕಾಶ ನೀಡಿರಲೇ ಇಲ್ಲ. ಸಿನಿಮಾ ರಿಲೀಸ್ಗೆ ಕರ್ನಾಟಕದಲ್ಲಿ ಅಸಹಕಾರ ತೋರಿಸಲಾಯಿತು. ಇದನ್ನು ಬ್ಯಾನ್ ಎಂದು ಚಿತ್ರತಂಡದವರು ಕರೆದರು. ಈ ಕಾರಣದಿಂದ ನೇರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು.

ಹಲವು ದಿನಗಳ ಹೋರಾಟಗಳ ಬಳಿಕ ಪ್ರಕರಣ ಕಮಲ್ ಹಾಸನ್ ಪರ ಆಯಿತು. ಆದಾಗ್ಯೂ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗಿಯೇ ಇಲ್ಲ. ಈಗ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಕೋರ್ಟ್ ಎದುರು ಕೋರಿತ್ತು. ಇದಕ್ಕೆ ಕೋರ್ಟ್ ಒಪ್ಪಿ ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಹೇಳಿಕೆ ನೀಡದಂತೆ ನಿರ್ಬಂಧ ಹೇರಿ ಬೆಂಗಳೂರಿನ 31ನೇ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ಒಟಿಟಿಗೆ ಬಂದಿದೆ. ಜುಲೈ 2ರಂದು ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ತಮಿಳು, ಕನ್ನಡ, ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಪ್ರಸಾರ ಕಂಡಿದೆ. ಈ ಚಿತ್ರ ಕನ್ನಡ ವರ್ಷನ್ ಸಿದ್ಧವಿದ್ದರೂ ಅದನ್ನು ಈ ಮೊದಲು ರಿಲೀಸ್ ಮಾಡಲು ತಂಡ ಮುಂದೆ ಬಂದಿರಲಿಲ್ಲ. ಈಗ ಒಟಿಟಿಯಲ್ಲಿ ಕನ್ನಡ ವರ್ಷನ್ ರಿಲೀಸ್ ಆಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!