ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಬೇಟಿ ನೀಡಿದ ವಿಚಾರವಾಗಿ ಪ್ರಕಟವಾದ ಸುದ್ದಿಯ ಫೇಸ್​​ಬುಕ್​ ಪೋಸ್ಟ್​​ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಸಾವನ್ನು ಬಯಸಿ ಕಮೆಂಟ್ ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪೀಣ್ಯ ಪೊಲೀಸರಿಗೆ ದೂರು ನೀಡಿದೆ.

ಬೆಂಗಳೂರು, ಜುಲೈ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವಿಚಾರವಾಗಿ ಪ್ರಕಟವಾಗಿರುವ ಸುದ್ದಿಗಳಿಗೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ಕಾರಣ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಸಿದ್ದರಾಮಯ್ಯ ಸಾವಿನ ಬಗ್ಗೆ ಪ್ರಸ್ತಾಪಿಸಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದಾರೆ..

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!