ಶಕ್ತಿ ಯೋಜನೆಯಲ್ಲಿ ದೊಡ್ಡ ಮೈಲಿಗಲ್ಲು – ಡಾ. ಪುಷ್ಪಾ ಅಮರನಾಥ್

ಮೈಸೂರು : ಈವರೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನುಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ಈವರೆಗೆ ನಮ್ಮ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಜಿಲ್ಲಾ ತಾಲೂಕು ಮಟ್ಟದಲ್ಲಿ 5 ಶತಕ ಮಹಿಳಾ ಸಂಭ್ರಮ ಆಚರಿಸುತ್ತಿದೆ. ನಮ್ಮದು ಮೊದಲೇ ಬಡವರ ಪರ ಮಹಿಳೆಯರ ಪರವಾದ ಸರ್ಕಾರ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ಸ್ವಾತಂತ್ರ್ಯ ಅನುಭವಿಸುವ ಅವಕಾಶವನ್ನ ನಮ್ಮ ಸರ್ಕಾರ ಮಾಡಿಕೊಟ್ಟಿದೆ.. ಇದೇ 14 ನೇ ತಾರೀಕು ಈ ಯಶಸ್ಸನ್ನ ಸಿಹಿ ಹಂಚಿ ಮಹಿಳೆಯರೊಂದಿಗೆ ಪ್ರಯಾಣಿಸಿ ಸಂಭ್ರಮಿಸಲು ತೀರ್ಮಾನಿಸಿದ್ದೇವೆ ಎಂದರು.

ಈವರೆಗೆ ಮೈಸೂರಲ್ಲಿ ಶಕ್ತಿ ಯೋಜನೆಗೆ 776.8 ಕೋಟಿ ಹಣ ವ್ಯವವಾಗಿದೆ. ರಾಜ್ಯದಲ್ಲಿ 12000,733.80 ಕೋಟಿ ಹಣ ವ್ಯಯವಾಗಿದೆ. ಇಷ್ಟು ದೊಡ್ಡ ಮೊತ್ತವನ್ನ ಇಡೀ ದೇಶದಲ್ಲೇ ಯಾವ ಸರ್ಕಾರವೂ ಕೊಟ್ಟಿಲ್ಲ. ಈ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 14 ರಂದು ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ ನೂತನ ಸಾರಿಗೆ ಬಸ್ ಗಳನ್ನ ಸಚಿವ ರಾಮಲಿಂಗ ರೆಡ್ಡಿ ಅವರು ಮೈಸೂರಿನಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ನಗರ ಬಸ್ ನಿಲ್ದಾಣದಲ್ಲಿ ಮೊದಲ ಹಂತದಲ್ಲಿ 200 ಬಸ್ ಲೋಕಾರ್ಪಣೆ ಆಗಲಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ಡಾ. ಪುಷ್ಪಾ ಅಮರನಾಥ್ ತಿಳಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!