ಬಿ. ಸರೋಜಾದೇವಿ ಒಬ್ಬ ಮೇರು ನಟಿ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿ. ಸರೋಜಾದೇವಿ ಒಬ್ಬ ಮೇರು ನಟಿ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಹುಭಾಷಾ ತಾರೆ ಹಿರಿಯ ನಟಿ ದಿವಂಗತ ಪದ್ಮಭೂಷಣ ಶ್ರೀ ಮತಿ ಬಿ. ಸರೋಜ ದೇವಿ ಇವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ಬಹುಭಾಷಾ ನಟಿ ಬಿ. ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು.ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು.

ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಬಿ. ಸರೋಜ ದೇವಿ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು