ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನ ಮಾಡಲು 1 ಬಸ್ಸಿಗೆ 6 ಸಾವಿರ ?

ಮೈಸೂರು: ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶ ಆಯೋಜನೆಗೊಂಡಿದೆ. ಇದು ಒಂದರ್ಥದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಮಾವೇಶವಾಗಿ ಮಾರ್ಪಟ್ಟಿದೆ. ಹೀಗಾಗಿ ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ನಾಯಕರು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಬಸ್ಸಿಗೆ 5 ರಿಂದ 6 ಸಾವಿರ ರೂ. ಕೊಡುತ್ತೇವೆ. 19 ರ ಸಮಾವೇಶಕ್ಕೆ ಜನ ಕರೆದುಕೊಂಡು ಬರಬೇಕು ಅಷ್ಟೇ ಎಂದು ಮುಖಂಡರು ಹೇಳಿದ್ದಾರೆ.


ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಾಯಕರು ಈ ಹೇಳಿಕೆ ನೀಡಿದ್ದಾರೆ. ಜುಲೈ 19ರ ಸಮಾವೇಶಕ್ಕೆ ಜನ ಕರೆ ತರಬೇಕು ಅಷ್ಟೇ. ಕರ್ಕೊಂಡ್ ಬರ್ತೀವಿ. ಒಂದು ಬಸ್ಸಿಗೆ 5 ರಿಂದ 6 ಸಾವಿರ ಕೊಡುತ್ತೀರಿ. ಇದನ್ನ ಬಿಟ್ಟರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಕಷ್ಟವನ್ನು ಕೇಳುವವರು ಯಾರಿದ್ದೀರಿ ಎಂದು ಕೇಳಿದ್ದಾರೆ.

ನಮ್ಮ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರಿಲ್ಲ. ನಮ್ಮ ಸರ್ಕಾರವೇ ಅಧಿಕಾರಿಗಳನ್ನು ಹಾಕುತ್ತದೆ. ಆದರೆ ಇರುವ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೆ. ಹಾಗಾಗಿ ನಾವು ಎಲ್ಲಿಗೆ ಹೋಗಿ ಕೇಳುವುದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಸೋತ ನಂತರ ಚಾಮುಂಡೇಶ್ವರಿ ಕ್ಷೇತ್ರ ಕೈ ಬಿಟ್ಟಿದ್ದಾರೆ ಎಂದು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಧನಗಹಳ್ಳಿ ಬಸವರಾಜು ಈ ರೀತಿ ಹೇಳಿದ್ದಾರೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!