ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ.

ಬೀದರ್ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ / ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!