ಗುಡ್​ಬಾಯ್ ಅಮ್ಮ! ಎಂದು ಪತ್ರ ಬರೆದು ಸಾವಿಗೆ ಶರಣಾದ ಮಗ.  

ಮೃತ ಬಾಲಕ ಗಂಧಾರ್

ಬೆಂಗಳೂರು: 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ, ನಗರದ ಸಿ.ಕೆ.ಅಚ್ಚುಕಟ್ಟುವಿನಲ್ಲಿ ನಡೆದಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಂಥ ಕಠಿಣ ನಿರ್ಧಾರ ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ.

ಗಂಧಾರ್, ಆತ್ಮಹತ್ಯೆಗೆ ಶರಣಾದ ಬಾಲಕ. ಈತ 7 ನೇ ತರಗತಿ ಓದುತ್ತಿದ್ದ. ಬೆಳಗ್ಗೆ ಎದ್ದ ತಂದೆ ಬಾಲಕ ಮಲಗಿದ್ದ ರೂಮ್​​ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ‘Forgive Me’ ಎಂದು ಬರೆಯಲಾಗಿರುವ ಡೆತ್ ನೋಟ್ ಸಿಕ್ಕಿದೆ. ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡೆತ್​ನೋಟ್​ನಲ್ಲಿ ಏನಿದೆ..?

ನಾನು ಮಾಡಿದ ಪಾಪ ಹಾಗೂ ತಪ್ಪನ್ನ ಕ್ಷಮಿಸಿ. ದಯವಿಟ್ಟು ಅಳಬೇಡಿ, ನಾನು ಈಗಾಗಲೇ ಸ್ವರ್ಗದಲ್ಲಿದ್ದೇನೆ. ಮನೆ ಚೆನ್ನಾಗಿರಲಿ ಅಂತಾ ಈ ನಿರ್ಧಾರ ಕೈಗೊಂಡಿದ್ದೇನೆ. ನಂಗೊತ್ತು ನಿಮಗೆ ಕೋಪ ಬರಲು ಕಾರಣನಾಗಿದ್ದೆ. ನನ್ನ ಉದ್ದೇಶ ಸಾವಾಗಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. 14 ವರ್ಷ ಖುಷಿಯಾಗಿದ್ದೆ, ಈಗ ಸ್ವರ್ಗದಲ್ಲಿ ಖುಷಿಯಾಗಿದ್ದೇನೆ. ಸ್ನೇಹಿತರೆಲ್ಲರಿಗೂ ಹೇಳಿ, ನಾನು ಖುಷಿಯಾಗಿದ್ದೇನೆ ಎಂದು. ಗುಡ್​ಬಾಯ್ ಅಮ್ಮ ಎಂದು ಪತ್ರ ಬರೆದು ಸಾವಿಗೆ ಶರಣಾಗಿದ್ದಾನೆ.

ಬಾಲಕನ ತಂದೆಯ ಹೆಸರು ಗಣೇಶ್ ಪ್ರಸಾದ್. ಇವರು ಮ್ಯೂಜಿಕ್ ಆರ್ಟಿಸ್ಟ್​. ಹಾಗೂ ತಾಯಿ ಹೆಸರು ಸವಿತಾ, ಇವರು ಜಾನಪದ ಗಾಯಕಿ. ಸವಿತಾ ಅವರು ಕಳೆದ ಶುಕ್ರವಾರ ಕಾರ್ಯಕ್ರಮದ ಮೇಲೆ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಸವಿತಾ ಬರುವವರೆಗೂ ಮರಣೋತ್ತರ ಪರೀಕ್ಷೆ ನಡೆಸದಿರಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!