ರಸ್ತೆಗಿಳಿಯದ ಸರ್ಕಾರಿ ಬಸ್ ಗಳು : ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ.

38 ತಿಂಗಳ ಬಾಕಿ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಲವೆಡೆ ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಟ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೂ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ತುಮಕೂರು ವಿವಿಯ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ.

ಹಾಗೆಯೇ ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದೆ .ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿವಿ ಕುಲಪತಿ ಬಿಕೆ ರವಿ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!