ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.





