ಪ್ರಧಾನಿ ಮೋದಿಗೆ ಪಾಕಿಸ್ತಾನದ ಸಹೋದರಿ . ಅಣ್ಣ-ತಂಗಿ ಸಂಬಂಧಕ್ಕೀಗ 30 ವರ್ಷ!

ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಪವಿತ್ರ ಹಬ್ಬ ರಕ್ಷಾ ಬಂಧನ ಸಮೀಪಿಸ್ತಿದ್ದಂತೆಯೇ ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸದ ಕಥೆಗಳು ಎಲ್ಲೆಡೆ ಪ್ರತಿಧ್ವನಿಸುತ್ತವೆ. ಅಂತಹ ಒಂದು ಕಥೆ ಇದೆ, ಅದು ಗಡಿಗಳನ್ನು ದಾಟಿ ಮಾನವೀಯತೆ ಮತ್ತು ಸಹೋದರತ್ವದ ಉದಾಹರಣೆಯಾಗಿ ನಿಂತಿದೆ! ಹೌದು, ನಿಮಗೆ ಗೊತ್ತಾ ಪ್ರಧಾನಿ ಮೋದಿಗೆ ಪಾಕಿಸ್ತಾನದ ಒಬ್ಬ ಸಹೋದರಿ ಇದ್ದಾರೆ. ಅವರು ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿದ್ದಾರೆ.

ಅಂದ್ಹಾಗೆ ಅವರ ಹೆಸರು, ಕಮರ್ ಮೊಹ್ಸಿನ್ ಶೇಖ್ ಕಳೆದ 30 ವರ್ಷಗಳಿಂದ ರಾಖಿ ಕಟ್ಟುತ್ತ ಬಂದಿರುವ ಅವರು ಈ ಬಾರಿಯೂ ಮೋದಿಗೆ ಸಿಹಿ ನೀಡಿ, ರಾಖಿ ಕಟ್ಟಲು ಸಿದ್ಧರಾಗಿದ್ದಾರೆ. ಅದಕ್ಕಾಗಿ ತಾವೇ ಎರಡು ರಾಖಿಗಳನ್ನ ಸಿದ್ಧಮಾಡಿಕೊಂಡಿದ್ದು, ಪ್ರಧಾನಿ ಕಚೇರಿಯ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ. ಈ ವರ್ಷ ಅವರು ಓಂ ಮತ್ತು ಗಣೇಶನ ವಿನ್ಯಾಸಗಳನ್ನು ಹೊಂದಿರುವ ಎರಡು ರಾಖಿಗಳನ್ನು ತಯಾರಿಸಿದ್ದಾರೆ.

ಯಾರು ಈ ಕಮರ್ ಮೊಹ್ಸಿನ್ ಶೇಖ್..?
ಕಮರ್ ಮೊಹ್ಸಿನ್ ಶೇಖ್ ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದರು. 1981ರಲ್ಲಿ ಅಹಮದಾಬಾದ್‌ನ ಪ್ರಸಿದ್ಧ ವರ್ಣಚಿತ್ರಕಾರ ಮೊಹ್ಸಿನ್ ಶೇಖ್ ಅವರನ್ನು ವಿವಾಹವಾದ ನಂತರ ಭಾರತಕ್ಕೆ ಬಂದು ನೆಲೆಸಿದ್ದಾರೆ. ಪ್ರಸ್ತುತ ಅವರು ತಮ್ಮ ಪತಿಯೊಂದಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ. ಕಮರ್ ಮತ್ತು ಮೋದಿ ನಡುವಿನ ವಿಶೇಷ ಸಂಬಂಧವು ಮೋದಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಾಮಾನ್ಯ ಕಾರ್ಯಕರ್ತನಾಗಿದ್ದಾಗ ಪ್ರಾರಂಭವಾಗಿದೆ.

ಅಣ್ಣ-ತಂಗಿ ಸಂಬಂಧ ಹೇಗೆ ಆರಂಭವಾಯಿತು?

1990 ರಲ್ಲಿ ಅಂದಿನ ಗುಜರಾತ್ ರಾಜ್ಯಪಾಲ ಡಾ.ಸ್ವರೂಪ್ ಸಿಂಗ್ ಮೂಲಕ ಮೋದಿಯನ್ನು ಭೇಟಿಯಾದೆ ಎಂದು ಕಮರ್ ಹೇಳುತ್ತಾರೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಭೇಟಿಯಾದರು. ಕಮರ್ ತನ್ನ ಪತಿಯ ಚಿತ್ರಕಲಾ ಪ್ರದರ್ಶನಕ್ಕಾಗಿ ದೆಹಲಿಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಡಾ. ಸ್ವರೂಪ್ ಸಿಂಗ್ ನರೇಂದ್ರ ಮೋದಿಗೆ ಕಮರ್ ಅವರನ್ನು ತಮ್ಮ ಮಗಳೆಂದು ಪರಿಗಣಿಸುವುದಾಗಿ ಹೇಳಿದರು. ಅದಕ್ಕೆ ಮೋದಿ, ಹಾಗಿದ್ದರೆ ಅವರು ನನ್ನ ಸಹೋದರಿ ಆಗುತ್ತಾಳೆ ಎಂದು ಉತ್ತರಿಸಿದ್ದರಂತೆ. ಅಲ್ಲಿಂದ ಈ ವಿಶಿಷ್ಟ ಸಂಬಂಧಕ್ಕೆ ಅಡಿಪಾಯ ಬಿದ್ದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!