ವೈಟ್‌ ಶರ್ಟ್‌ ತಂದ ಆಪತ್ತು. ಅದಲುಬದಲಾಯ್ತು ಟಾರ್ಗೆಟ್ !

ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಊರಿಗೆ ತೆರಳಿದ್ದ. ಆದ್ರೆ, ಊರಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಬ್ಬದ ದಿನ ಆತ ಹಾಕಿದ್ದ ಬಿಳಿ ಬಣ್ಣದ ಶರ್ಟ್ ಅವನ ಸಾವಿಗೆ ಕಾರಣವಾಗಿದೆ. ಹೌದು.. ಟಾರ್ಗೆಟ್‌ ಮಾಡಿದ್ದವನನ್ನು ಬಿಟ್ಟು ಮತ್ತೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದಕ್ಕೆ ಕಾರಣವಾಗಿದ್ದು ವೈಟ್‌ ಶರ್ಟ್‌. ಈ ಆಘಾತಕಾರಿ ಘಟನೆ ಮಂಡ್ಯದಲ್ಲಿ ನಡೆದಿದೆ. ಟಾರ್ಗೆಟ್ ಮಾಡಿದ್ದವನ ಬಿಟ್ಟು ಮತ್ತೊಬ್ಬನ ಹತ್ಯೆ: ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್‌ ಶರ್ಟ್‌

ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಊರಿಗೆ ಬಂದಿದ್ದ. ಈ ವೇಳೆ ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಅರುಣ್ ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನೆ ನಡೆದಿದ್ದು ಹೀಗೆ?
ನಿನ್ನೆ (ಆಗಸ್ಟ್ 08) ರಾತ್ರಿ ಹತ್ಯೆಯಾದ ಅರುಣ್ ತನ್ನ ಸ್ನೇಹಿತ ಸೂರ್ಯ, ಸಹೋದರ ಉಮೇಶ್ ಮತ್ತು ಸಂಬಂಧಿ ದೇವರಾಜ್ ಜೊತೆ ಪಾರ್ಟಿ ಮಾಡುತ್ತಿದ್ದ. ಇದೇ ವೇಳೆ ಬಾರ್‌ ಮುಂಭಾಗದಲ್ಲಿ ಸಿಕ್ಕ ವಿಕ್ರಮ್ ಎಂಬಾತನ ಜೊತೆ ಸೂರ್ಯ ಹಳೇ ದ್ವೇಷದ ವಿಚಾರಕ್ಕೆ ಜಗಳ ತೆಗೆದಿದ್ದಾನೆ. ಎರಡು ವರ್ಷದ ಹಿಂದಿನ ಜಗಳದ ವಿಚಾರವನ್ನು ಮುಂದಿಟ್ಟುಕೊಂಡು ಸೂರ್ಯ, ವಿಕ್ರಮ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ, ಅರುಣ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಿ ಪಾರ್ಟಿ ಮುಂದುವರೆಸಿದ್ದಾನೆ.

ಸೂರ್ಯನ ಮೇಲೆ ಅಟ್ಯಾಕ್‌ ಮಾಡಲು ಕಾಯುತ್ತಿದ್ದ ದುಷ್ಕರ್ಮಿಗಳಿಗೆ ವಿಕ್ರಮ್ ಸುಳಿವು ನೀಡಿದ್ದಾನೆ. ‘ಸೂರ್ಯ ಬಿಳಿ ಶರ್ಟ್ ಹಾಕಿದ್ದಾನೆ’ ಎಂದು ಮಾಹಿತಿ ನೀಡಿದ್ದ. ಈ ಮಾತನ್ನು ಕೇಳಿದ ಹಂತಕರು ಸೂರ್ಯನ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ಆದರೆ, ದುಷ್ಕರ್ಮಿಗಳು ಬರುತ್ತಿದ್ದಂತೆ ಪಾರ್ಟಿ ಮಾಡುತಿದ್ದ ಸೂರ್ಯ ಮತ್ತು ತಂಡದವರು ತಪ್ಪಿಸಿಕೊಂಡು ಓಡಿದ್ದಾರೆ.

ಹಂತಕರು, ಬಿಳಿ ಶರ್ಟ್ ಧರಿಸಿದ್ದ ಅರುಣ್‌ನನ್ನೇ ಸೂರ್ಯ ಎಂದು ತಪ್ಪಾಗಿ ತಿಳಿದು ಹಿಂಬಾಲಿಸಿದ್ದಾರೆ. ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅರುಣ್‌ನ ಮೇಲೆ ಮನಬಂದಂತೆ ಲಾಂಗು, ಮಚ್ಚು, ಮತ್ತು ಡ್ರ್ಯಾಗರ್‌ನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ದಾಳಿಯಾಗುತ್ತಿದ್ದಂತೆ ಅರುಣ್‌ನೊಂದಿಗೆ ಇದ್ದ ಸಂಬಂಧಿ ದೇವರಾಜು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಈ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!