ಚುನಾವಣಾ ಅವ್ಯವಹಾರ : ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೋರಾಟಕ್ಕೆ ಕರೆ.

ಮೈಸೂರು : ದೇಶದಲ್ಲಿ ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಮತಗಳ್ಳತನದ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ. ಹೀಗಾಗಿ ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿ ಅವರ ಜೊತೆ ಕೈ ಜೊಡಿಸಿ ಎಂದು ಸಾರ್ವಜನಿಕರಿಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ವರುಣಾ ಕ್ಷೇತ್ರ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರ ನಮ್ಮ ಕ್ಷೇತ್ರ ನಮ್ಮ ಮನೆ. ವರುಣಾದಲ್ಲಿ 1108 ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡುತ್ತಿದ್ದೇವೆ. ಕಳೆದ ಬಾರಿ 570 ಕೋಟಿ ಅನುದಾನ ಕೊಟ್ಟಿದ್ದರು. ಇದೀಗ ದುಪ್ಪಟ್ಟು ಅನುದಾನ ಸಿಎಂ ಕೊಟ್ಟಿದ್ದಾರೆ. ಇದರಿಂದ ಅಭಿವೃದ್ಧಿ ವಿಚಾರಕ್ಕೆ ಹಣದ ಕೊರತೆ ಇಲ್ಲ ಎಂದು ತೋರಿಸುತ್ತೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಯನ್ನು ಟೀಕೆ ಮಾಡುತ್ತಾರೆ. ಗ್ಯಾರೆಂಟಿ ಯೋಜನೆಯಿಂದ ಖಜಾನೆ ಖಾಲಿ ಆಗಿದೆ ಅಂತ ಹೇಳುತ್ತಿದ್ದಾರೆ ಅವರ ಹೇಳಿಕೆಗಳಿಗೆ ಇಂದಿನ ಕಾರ್ಯಕ್ರಮ ಉತ್ತರ. ಕೇವಲ ವರುಣಾ ಅಲ್ಲ ರಾಜ್ಯಾದ್ಯಂತ ಅಭಿವೃದ್ದಿ ನಡೆಯುತ್ತಿದೆ.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಭಾರತದಲ್ಲೆ ಮೊದಲಿದೆ. ಎರಡು ಲಕ್ಷಕ್ಕೂ ಮೀರದ ತಲಾ ಆದಾಯ. ತಲಾ ಆದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ. ಜನರ ತೆರಿಗೆ ಹಣ ಅವರಗೆ ವಾಪಸ್ ಕೊಟ್ಟಿದ್ದೇವೆ. ಅದೇ ಹಣವನ್ನು ಅವರು ಖರ್ಚು ಮಾಡಿ ಆರ್ಥಿಕ ಪ್ರಗತಿ ಆಗಿದೆ . ಇದು ಗ್ಯಾರೆಂಟಿ ಯೋಜನೆ ಟೀಕಿಸಿದವರಿಗೆ ಮುಖಕ್ಕೆ ಹೊಡೆದ ಹಾಗೇ ಆಗಿದೆ ಎಂದರು.
ಶ್ರೀಮಂತರು ಹಾಗೂ ಬಡವರ ನಡುವೆ ಆರ್ಥಿಕತೆ ಅಂತರ ಹೆಚ್ಚಾಗುತ್ತಿದೆ. ಇದಕ್ಕೆ ಕೇಂದ್ರದ ನಿಯಮಗಳು ಕಾರಣ. ಇದನ್ನ ನಿವಾರಿಸಲು ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಭಾರತದಲ್ಲೆ ಕೊಟ್ಟ ಭರವಸೆ ಈಡೇರಿಸಿದ ಸರ್ಕಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ರಾಹುಲ್ ಗಾಂಧಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ದೇಶದಲ್ಲಿ ಚಯನಾವಣಾ ಅವ್ಯವಹಾರ ನಡೆಯುತ್ತಿದೆ. ಅಡ್ಡದಾರಿಯಿಂದ ಸರ್ಕಾರ ಅಧಿಕಾರಕ್ಕೆ ಬರುತ್ತಿವೆ . ಇದರಲ್ಲಿ ಚುನಾವಣೆ ಆಯೋಗ ಶಾಮೀಲಾಗಿದೆ ಎಂದು ರಾಹುಲ್ ಗಾಂಧಿ ಸಾಕ್ಷಿ ಸಮೇತ ಆರೋಪಿಸಿದ್ದಾರೆ. ಇದರಿಂದ ಜನಾದೇಶಕ್ಕೆ ವಿರುದ್ದವಾದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಫೇಕ್ ವೋಟರ್ ಐಡಿ ಬಳಸಿ ಮತದಾನ ಮಾಡೋದು. ಪ್ರತಿ ಚುನಾವಣೆ ಫೇಕ್ ಮತದಾರರನ್ನು ಸೇರಿಸಿ ಬಿಜೆಪಿ ಪಕ್ಷ ಗೆದ್ದಿದೆ.

ಎಲೆಕ್ಟ್ರಾನಿಕ್ ಡೇಟಾ ಕೊಡಲು ಚುನಾವಣೆ ಆಯೋಗ ಹಿಂದೇಟು ಹಾಕುತ್ತಿದೆ.. ರಾಹುಲ್ ಗಾಂಧಿ ಯವರ ಪ್ರಶ್ನೆಗೆ ಆಯೋಗ ಉತ್ತರ ಕೊಡುತ್ತಿಲ್ಲ. ಇದರಿಂದ ಈ ಅಕ್ರಮದಲ್ಲಿ ಆಯೋಗ ಶಾಮೀಲಾಗಿದೆ ಎಂಬ ಅನುಮಾನ ಮೂಡಿಸುತ್ತಿದೆ. ಚುನಾವಣೆ ಅಕ್ರಮದಿಂದ ಜನಾದೇಶದ ವಿರುದ್ದ ಫಲಿತಾಂಶ ಬರುತ್ತೆ. ಕೇವಲ ದುಡ್ಡು ಇರುವವರು ಚುನಾವಣೆಯಲ್ಲಿ ಆರಿಸಿ ಬರುತ್ತಾರೆ. ಆದರಿಂದ ರಾಹುಲ್ ಗಾಂಧಿ ಕೊಟ್ಟ ಕರೆಗೆ ನಾವು ಜೊತೆಯಾಗಬೇಕು. ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿಯವರಿಗೆ ಕೈ ಜೊಡಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು