ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಸಾವು! ಕಾವೇರಿ ವನ್ಯಜೀವಿಧಾಮದಲ್ಲಿ ಘಟನೆ.

ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಪ್ರಾಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟಿ ಗಸ್ತಿನ ಕಿರುಬನಕಲ್ಲು ಎಂಬ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳ ಕಳೇಬರ ಪತ್ತೆಯಾಗಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಪ್ರಾಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟಿ ಗಸ್ತಿನ ಕಿರುಬನಕಲ್ಲು ಎಂಬ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳ ಕಳೇಬರ ಪತ್ತೆಯಾಗಿವೆ.

ಅರಣ್ಯ ರಕ್ಷಣಾ ಸಿಬ್ಬಂದಿ ನಿನ್ನೆ ಗಸ್ತು ತಿರುಗುವಾಗ ಒಂದು ಹುಲಿ ಮರಿಯ ಕಳೇಬರ ಪತ್ತೆ ಆಗಿದೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿ ಆ ಪ್ರದೇಶದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹುಲಿ ಮರಿಯು ಮೃತಪಟ್ಟ ಸಮೀಪ ಇರುವ ಕಲ್ಲು ಬಂಡೆಯ ಗುಹೆಯೊಳಗೆ ಮತ್ತೊಂದು ಹುಲಿ ಮರಿಯು ಮೃತಪಟ್ಟಿರೋದು ಪತ್ತೆಯಾಗಿದೆ.

NTCA ಸದಸ್ಯರನ್ನೊಳಗೊಂಡ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ಪ್ರಕ್ರಿಯೆಯಲ್ಲಿ ಸದರಿ ಎರಡೂ ಹುಲಿ ಮರಿಗಳು ಸುಮಾರು 8 ರಿಂದ 10 ದಿನಗಳ ಮರಿಗಳಾಗಿರೋದು ಗೊತ್ತಾಗಿದೆ.

ತನಿಖೆ ನಡೀತಿದೆ :
ಮೃತ ಹುಲಿ ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟು ಹಸಿವಿನಿಂದ ನಿತ್ರಾಣಗೊಂಡು ಮೃತಪಟ್ಟಿರುತ್ತದೆ ಎಂದು ಪಶು ವೈದ್ಯರು ಸ್ಥಳದಲ್ಲಿಯೇ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಹಾಗೂ ಮೃತ ಹುಲಿ ಮರಿಗಳ ಸಾವಿನ ನಿಖರ ಮಾಹಿತಿಗಾಗಿ ಮೃತ ಹುಲಿ ಮರಿಗಳ ದೇಹದಿಂದ ಕೆಲವು ಮಾದರಿ ತುಣುಕುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿರುತ್ತದೆ. ಮರಣೋತ್ತರ ಪರೀಕ್ಷೆಯ ನಂತರ, ಎನ್.ಟಿ.ಸಿ.ಎ ಸದಸ್ಯರನ್ನೊಳಗೊಂಡ ತಂಡದವರ ಸಮ್ಮುಖದಲ್ಲಿ ಹುಲಿ ಮರಿಗಳ ಮೃತ ದೇಹವನ್ನು ಬೆಂಕಿಯಿಂದ ಸುಡಲಾಗಿರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!