ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ : ಎಸ್​ಐಟಿ ತಂಡ ಹರಸಾಹಸ ಸವಾಲಾಯ್ತು 13ನೇ ಪಾಯಿಂಟ್..!

ಮಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಹರಸಾಹಸ ಪಡ್ತಿರೋ ಎಸ್​ಐಟಿ ತಂಡಕ್ಕೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ. 13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಎಸ್​ಐಟಿ ತಂಡ ಹರಸಾಹಸ ಪಡುತ್ತಿದೆ. ಈಗ ಎಸ್​ಐಟಿ ಅಧಿಕಾರಿಗಳಿಗೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ ಅಗೆದು.. ಅಗೆದು 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ.

ಅನಾಮಿಕ ದೂರುದಾರನ ಜೊತೆ ಎಸ್​ಐಟಿ ತಂಡ
13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಭೂಮಿಯಿಂದ ಚಿಮ್ಮಿದ ಜಲರಾಶಿಯಿಂದ ಕಾರ್ಯಾಚರಣೆಗೆ ತೊಡಕಾಗಿತ್ತು. ನಿನ್ನೆ ಕತ್ತಲಾದ ಕಾರಣ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದ್ದು, ಅನಾಮಿಕ ದೂರುದಾರ ಉಳಿದ ಜಾಗವನ್ನು ಅಗೆಯಲು ಪಟ್ಟು ಹಿಡಿದಿದ್ದ. ಹೀಗಾಗಿ ಇಂದು 13ನೇ ಸ್ಪಾಟ್​ನಲ್ಲಿ ಮತ್ತಷ್ಟು ಅಡಿ ಆಳ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ.

ಇನ್ನೂ, ಮತ್ತೊಂದು ಕಡೆ ತನಿಖೆಗೆ ದೆಹಲಿಯಿಂದ ರಾಷ್ಟ್ರೀಯ ಮಾನವಹಕ್ಜು ಆಯೋಗದ ಅಧಿಕಾರಿಗಳು ಬಂದಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಯುವರಾಜ್ ನೇತೃತ್ವದಲ್ಲಿ NHRC ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಈಗಾಗಲೇ NHRC ಅಧಿಕಾರಿಗಳು ಅನಾಮಿಕ ದೂರುದಾರನ ವಿಚಾರಣೆ ನಡೆಸಿದ್ದಾರೆ. ಅಲ್ಲದೇ NHRC ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್​ನಿಂದ ದಾಖಲೆಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಿಂದ UDR ಪ್ರಕರಣದ ದಾಖಲೆ ಸಂಗ್ರಹಿಸಲಾಗಿದೆ. ಪಡೆದ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಟೆಸುತ್ತಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು