ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.

ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ ಚಲನಚಿತ್ರದ ಮೇರು ನಟರಾದ ಡಾ.ವಿಷ್ಣುವರ್ಧನ್ ಕೇವಲ ಒಬ್ಬ ವ್ಯಕ್ತಿಯಾಗಿರಲಿಲ್ಲ ಒಂದು ದೊಡ್ಡ ಶಕ್ತಿಯಾಗಿದ್ದರು. ಅಂತಹ ವ್ಯಕ್ತಿಯ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ ಪುಣ್ಯಭೂಮಿಯ ಪುನರ್ ನಿರ್ಮಾಣವನ್ನು ರಾಜ್ಯ ಸರ್ಕಾರ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ಕಾನೂನು ಚೌಕಟ್ಟಿನಲ್ಲಿ ಭೂಮಿ ಬೆಲೆಯನ್ನು ನಿಗದಿ ಪಡಿಸಿ ಕರ್ನಾಟಕದ ಅಭಿಮಾನಿಗಳೆಲ್ಲ ಆ ಜಾಗವನ್ನು ಖರೀದಿ ಮಾಡಿ ವಿಷ್ಣುವರ್ಧನ್ ಅವರ ಬೃಹತ್ ದೇವಾ ಲಯವನ್ನು ನಾವುಗಳೆಲ್ಲರೂ, ಕಟ್ಟುತ್ತೇವೆ ಎಂದರು.

ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ.ವಿಷ್ಟು ವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು, ನಟ ಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದೆ 2009ರಿಂದಲೂ ಸ್ಮಾರಕ ನಿರ್ಮಾಣಕ್ಕಾಗಿ ಕಾನೂನು ಹೋರಾಟಗಳನ್ನು ಅಭಿಮಾನಿ ದೇವರುಗಳು ಮಾಡಿ ಕೊಳ್ಳುತ್ತಲೇ ಬರುತ್ತಿದ್ದೇವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ.

ಕೊನೆಗೂ ಈಗಿರುವ ಸಮಾಧಿ ಸ್ಥಳವನ್ನು ಉಳಿಸಿಕೊಳ್ಳ ಲಾಗದ ಸ್ಥಿತಿಗೆ ರಾಜಕಾರಣಿಗಳು, ಚಿತ್ರನಟರು, ಅಭಿಮಾನಿ ಗಳಾದ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಂಡು, ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡಿ ಸ್ಮಾರಕವನ್ನು ಕಾಪಾಡಿಕೊಳ್ಳಬೇಕು.

ಆ ಸ್ಮಾರಕವನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾ ಗ್ರಾಮವಾಗಿ ಅಭಿವೃದ್ಧಿಪಡಿಸಬೇಕು. ಈ ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಡಿಪಿಕೆ ಪರ ಮೇಶ್, ಮಹದೇವಸ್ವಾಮಿ, ಕೆ.ಪಿ.ರವಿ, ಮಹೇಶ್, ಆಕ್ಟರ್, ಬಸವ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!