ಹಿರಿಯ ಸಾಹಿತಿ .ಹಂ.ಪ. ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಸಪ್ಟೆಂಬರ್ 20: ಹೆಸರಾಂತ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು.
ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.





