ಶಿರಾಡಿ ಘಾಟ್‌ನಲ್ಲಿ ಭೂಕುಸಿತದಿಂದ ಕಾರುಗಳ ಮೇಲೆ ಬಿದ್ದ ಮರ

ಗುಂಡ್ಯ (ದಕ್ಷಿಣ ಕನ್ನಡ): ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಶನಿವಾರ ಸಂಜೆ ಬೃಹತ್​ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಎರಡು ಕಾರುಗಳಿಗೆ ಹಾನಿಯಾಗಿದೆ. ಘಟನೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಶನಿವಾರ ಸಂಜೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗಲೇ ಎರಡು ಕಾರುಗಳ ಮೇಲೆ ದಿಢೀರ್ ಮರಗಳು ​​ ಉರುಳಿ ಬಿದ್ದಿವೆ. ಇದರಿಂದ ವಾಹನಗಳು ತೀವ್ರ ಹಾನಿಗೊಳಗಾದರೂ, ಅದೃಷ್ಟವಶಾತ್ ಕಾರಿನಲ್ಲಿದ್ದವರು ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಈ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಸ್ತೆಯುದ್ದಕ್ಕೂ ನೂರಾರು ವಾಹನಗಳು ಎರಡೂ ಬದಿಯಲ್ಲಿ ಸಿಲುಕಿಕೊಂಡಿವೆ. ಸವಾರರು ಮಳೆಯಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ತುರ್ತು ಸಿಬ್ಬಂದಿ ಧಾವಿಸಿದ್ದು, ರಸ್ತೆ ತೆರವು ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ. ಮರಗಳನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯ ರಾತ್ರಿಯೂ ಮುಂದುವರೆದಿದೆ. ಸದ್ಯಕ್ಕೆ ಬೆಂಗಳೂರು-ಮಂಗಳೂರು ಪ್ರಯಾಣಿಕರು ಶಿರಾಡಿ ಘಾಟ್​ ಮಾರ್ಗದ ಬದಲಿಗೆ, ಚಾರ್ಮಾಡಿ ಘಾಟ್​ ಅಥವಾ ಬಿಸಿಲೆ ಘಾಟ್​, ಮಡಿಕೇರಿ ಮೂಲಕ ಪ್ರಯಾಣ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಸಾರ್ವಜನಿಕರಿಗೆ ಅನಗತ್ಯವಾಗಿ ಘಾಟ್ ಮಾರ್ಗಗಳಲ್ಲಿ ಸಂಚಾರ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಸಕಲೇಶಪುರ ಹಾಗೂ ನೆಲ್ಯಾಡಿ ಗ್ರಾಮಾಂತರ ಪೊಲೀಸರು, ಸಕಲೇಶಪುರ ಉಪ ವಿಭಾಗಾಧಿಕಾರಿಗಳು ಹಾಗೂ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್, ಮಾರನಹಳ್ಳಿ ಉಪ ವಲಯ ಅರಣ್ಯಾಧಿಕಾರಿ ಮಹದೇವ್, ಕೆಂಪುಹೊಳೆ ಬೀಟ್‌ನ ಅರಣ್ಯ ವೀಕ್ಷಕ ಲೋಕೇಶ್ ಇತರ ಸಿಬ್ಬಂದಿ ಮರಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮತ್ತೊಂದೆಡೆ, ಶನಿವಾರ ಸಂಜೆ ಘಾಟಿ ರೈಲು ಮಾರ್ಗದಲ್ಲಿಯೂ ಭೂಕುಸಿತ ಸಂಭವಿಸಿದ್ದು, ಕೆಲ ರೈಲುಗಳ ಮಾರ್ಗದಲ್ಲಿ ತುರ್ತು ಬದಲಾವಣೆ ಮಾಡಲಾಗಿದೆ. ಸಿರಿಬಾಗಿಲು-ಯಡಕುಮಾರಿ, ಕಡಗರವಳ್ಳಿ, ದೋಣಿಗಲ್ ವಿಭಾಗಗಳ ನಡುವೆ ಭೂ ಕುಸಿತಗೊಂಡಿದೆ. ಮಂಗಳೂರು–ವಿಜಯಪುರ (07378) ವಿಶೇಷ ಎಕ್ಸ್‌ಪ್ರೆಸ್, ಮುರ್ಡೇಶ್ವರ–ಎಸ್‌ಎಂವಿಟಿ ಬೆಂಗಳೂರು ರೈಲು, ಕಣ್ಣೂರು–ಕೆಎಸ್‌ಆರ್ ಬೆಂಗಳೂರು (16512) ರೈಲು ಹಾಗೂ ಕಾರವಾರ–ಕೆಎಸ್‌ಆರ್ ಬೆಂಗಳೂರು (16596) ರೈಲುಗಳ ಮಾರ್ಗ ಬದಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!