ಗಗನಯಾತ್ರೆ ಶುಭಾಂಶು ಶುಕ್ಲಾ ಮರಳಿ ತಾನ್ನಾಡಿಗೆ ! ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಗಗನಯಾತ್ರಿ.

ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಯಾಗಲಿದ್ದಾರೆ. ಬಳಿಕ, ತಮ್ಮ ತವರು ಲಖನೌಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಕ್ಸಿಯಂ-4 ಮಿಷನ್‌ ಗಾಗಿ ಅಂತರ ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027 ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡು ತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿ ಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ
ಹಿಂದಿರುಗುತ್ತಾರೆಎಂದು ಹೇಳಲಾಗಿದೆ. ಐಎಸ್‌ಎಸ್‌ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರಳಿದ್ದರು. ಈ ಅವಧಿಯಲ್ಲಿ ಅವರು ಭಾರತಕ್ಕೆ ಸಂಬಂಧಿಸಿದ 7 ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದಾರೆ. ಅವು ಗಳನ್ನು ಈಗ ಭಾರತೀಯ ವಿಜ್ಞಾನಿಗಳು ಪರಿಶೀಲನೆಗಾಗಿ ಮರಳಿ ತರಲಾಗಿದ್ದು, ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಮರಳಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ಭಾರತದ

ಬಾಹ್ಯಾಕಾಶ ವೈಭವ ದೇಶದ ಮಣ್ಣನ್ನು ಸ್ಪರ್ಶಿಸಿದೆ. ಭಾರತ ಮಾತೆಯ ಪುತ್ರ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗ್ಗಿನ ಜಾವ ದೆಹಲಿಗೆ ಬಂದಿಳಿದರು. ಅವರೊಂದಿಗೆ ಮತ್ತೊಬ್ಬ ಸಮಾನ ಸಾಧನೆ ಮಾಡಿದ, ಭಾರತದ ಮೊದಲ ಮಾನವ ಗಗನಯಾನಕ್ಕೆ ಆಯ್ಕೆಯಾದ ಗಗನಯಾತ್ರಿಗಳಲ್ಲಿ ಒಬ್ಬರಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ. ಬಾಲಕೃಷ್ಣ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಮಿಷನ್‌ ಭಾರತದ ನಿಯೋಜಿತ ಬ್ಯಾಕಪ್ ಆಗಿದ್ದರು ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!