ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ

ಬಿಎಂಟಿಸಿ ಬಸ್ ಚಕ್ರ ಹರಿದು ಪ್ರಯಾಣಿಕನೊಬ್ಬ ಸ್ಥಳದಲ್ಲೇ ಪ್ರಾಣ ಬಿಟ್ಟಿರೋ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಯನಗರ 4th ಬ್ಲಾಕ್​​​ನಲ್ಲಿ ವಾಸವಾಗಿದ್ದ ಸಂಪಂಗಿ ಎಂಬಾತ ಮಾರ್ಕೆಟ್​​​ನಲ್ಲಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮಾರ್ಕೆಟ್​​ಗೆ ಹೋಗಲು ಎಂದಿನಂತೆ ಬಸ್ ನಿಲ್ದಾಣಕ್ಕೆ ಬಂದಿದ್ದ.

ಆದ್ರೆ, ಬಸ್ ಹತ್ತುವಾಗಲೇ​ ರೂಟ್ ನಂಬರ್ 25 A ಚಾಲಕ ಹಿಂಬದಿಯ ಡೋರ್ ಹಾಕಿದ್ದಾನಂತೆ. ಪರಿಣಾಮ ಸಂಪಂಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ರಭಸಕ್ಕೆ ಸಂಪಂಗಿ ತಲೆ ಮೇಲೆ ಚಕ್ರ ಹರಿದು ಹೋಗಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಪತಿಯನ್ನು ಕಳೆದುಕೊಂಡ ಪತ್ನಿ, ಹಾಗೂ ಮಗಳು ಕಣ್ಣೀರು ಹಾಕಿತ್ತಿದ್ದಾರೆ.

ಇನ್ನೂ ಕೆಲವು ದಿನಗಳ ಹಿಂದೆ ಪೀಣ್ಯ 2ನೇ ಹಂತದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯೆಯಲ್ಲಿ ಚಾಲಕನ ಬೇಜಬ್ದಾರಿಯಿಂದ ಅಪಘಾತ ಸಂಭವಿಸಿತ್ತು. ಚಾಲಕ ಬಸ್ ಚಾಲನೆ ಮಾಡಲು ಹೋಗಿ ರಸ್ತೆ ಪಕ್ಕದಲ್ಲೇ ಇದ್ದ ಪೆಟ್ಟಿ ಅಂಗಡಿಗೆ ಗುದಿದ್ದ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇದು ಅಷ್ಟೇ ಅಲ್ಲದೇ ಬಿಎಂಟಿಸಿ ಚಾಲಕ ಎಡವಟ್ಟಿನಿಂದ ಇನ್ನೆಷ್ಟು ಜೀವಗಳು ಬಲಿಯಾಗುತ್ತವೆಯೋ ಗೊತ್ತಿಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!