ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ ಅಧಿಕಾರವನ್ನು ಚಲಾಯಿಸಿ ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದು ತರಲಾಗಿದೆ. ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ನಿಷೇಧಾಜ್ಞೆಯ ಆದೇಶವನ್ನು ಹೊರಡಿಸುವಂತೆ ಕೋರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿಯನ್ನು ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.‌ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಮ ಅಧಿಕಾರವನ್ನು ಚಲಾಯಿಸಿ ಆದೇಶಿಸಿದ್ದಾರೆ.

ಧರ್ಮಸ್ಥಳದ ತಿಮರೋಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿರುವ ಪೊಲೀಸರು ಬಿಗುಬಂದೋಬಸ್ತ್‌ನಲ್ಲಿ ಮಧ್ಯಾಹ್ನ 1.20 ಕ್ಕೆ ಪೊಲೀಸರು ಠಾಣೆಗೆ ಕರೆದು ತಂದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಗೆ ಆಗಮಿಸಿದ ವಕೀಲರ ತಂಡವು ಭದ್ರತಾ ಜಾಮೀನಿನ ಮೇಲೆ ತಿಮರೋಡಿ ಬಿಡುಗಡೆಗೆ ಕ್ರಮಕ್ಕೆ ಸಿದ್ಧತೆ ನಡೆಸಿದೆ. ತಿಮ್ಮರೊಡಿ ಜತೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು, ಠಾಣೆಗೆ ಆಗಮಿಸುವ ಮುನ್ನವೇ ಮಹೇಶ್ ಶೆಟ್ಟಿ ಪರ ವಕೀಲರು ಠಾಣೆಯಲ್ಲಿದ್ದರು. ತಿಮರೋಡಿಯನ್ನು ಠಾಣೆಯಲ್ಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ‌.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!