ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಚಿತ್ರದುರ್ಗ: ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ.

ಸದ್ಯ ಶಾಸಕ ಕೆಸಿ ವಿರೇಂದ್ರ ಹೊರರಾಜ್ಯದಲ್ಲಿದ್ದಾರೆ. ಇದೀಗ ಇಡಿ ದಾಳಿಯಿಂದ 2016 ರ ಐಟಿ ದಾಳಿ ವೇಳೆ ಪತ್ತೆಯಾದಂತೆ ಮತ್ತೊಂದು ಅಕ್ರಮ ಬಯಲಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ

Related Posts

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!