ಕೇರಳದಲ್ಲಿ ಮ್ಯಾಚ್ ಆಡಲಿರುವ ಲಿಯೋನೆಲ್ ಮೆಸ್ಸಿ ಟೀಮ್

ವರ್ಲ್ಡ್​ ಫುಟ್​ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಕ್ಟೋಬರ್​ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅರ್ಜೆಂಟೀನಾದ ಫುಟ್​ಬಾಲ್ ಅಸೋಸಿಯೇಷನ್ (ಎಎಫ್​ಎ)​ ಅಧಿಕೃತವಾಗಿ ಮಾಹಿತಿ ನೀಡಿದೆ.

ಫುಟ್​ಬಾಲ್ ಐಕಾನ್​ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ನವೆಂಬರ್​ 10 ರಿಂದ 18ರ ವರೆಗೆ ಭಾರತದ ಪ್ರವಾಸದಲ್ಲಿ ಇರುತ್ತಾರೆ. ಈ ವೇಳೆ ಕೇರಳ ಸರ್ಕಾರ ಹಾಗೂ ರಿಪೋರ್ಟರ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ಸಹಭಾಗಿತ್ವದಲ್ಲಿ ಫುಟ್​ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗುತ್ತದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯುವ ಈ ಮಹತ್ವದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಖಾಡಕ್ಕೆ ಇಳಿಯಲಿದ್ದಾರೆ. ಇದು ಭಾರತದ ಫುಫ್​ಬಾಲ್ ಅಭಿಮಾನಿಗಳಿಗೆ ಐತಿಹಾಸಿಕ ಕ್ಷಣವಾಗಿರಲಿದೆ ಎಂದು ಹೇಳಲಾಗಿದೆ.

ಲಿಯೋನೆಲ್ ಮೆಸ್ಸಿ ಅವರು ಕೇರಳಕ್ಕೆ ಭೇಟಿ ನೀಡುತ್ತಾರೋ, ಇಲ್ವೋ ಎನ್ನುವ ಅನುಮಾನವಿತ್ತು. ಇನ್ನು ಫಿಫಾ ಟ್ರೋಫಿಯಲ್ಲಿ ಅರ್ಜೆಂಟೀನಾ ಟೀಮ್ ಪಾಲ್ಗೊಳ್ಳುವುದರಿಂದ ಕೇರಳಕ್ಕೆ ಪ್ರಯಾಣಿಸುವುದಿಲ್ಲ ಎನ್ನಲಾಗಿತ್ತು. ಆದರೆ ರಿಪೋರ್ಟರ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ, ಸಂಪಾದಕ ಆಂಟೊ ಆಗಸ್ಟೀನ್ ಅವರು ಇದನ್ನ ತಳ್ಳಿ ಹಾಕಿದ್ದರು. ಅದರಂತೆ ಇದೀಗ ಎಎಫ್​ಎ ಅಧಿಕೃತವಾಗಿ ಮಾಹಿತಿ ನೀಡಿದ್ದರಿಂದ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ಟೀಮ್ ಕೇರಳಕ್ಕೆ ಭೇಟಿ ನೀಡುವುದಷ್ಟೇ ಅಲ್ಲ, ಫುಟ್​ಬಾಲ್ ಪಂದ್ಯ ಕೂಡ ಆಡಲಿದೆ ಎನ್ನುವುದು ಅಭಿಮಾನಿಗಳಿಗೆ ಸಂತಸವನ್ನು ಮತ್ತಷ್ಟು ಹೆಚ್ಚು ಮಾಡಿದೆ.

2022ರಲ್ಲಿ ಕತಾರ್​ನಲ್ಲಿ ನಡೆದಂತಹ ವಿಶ್ವಕಪ್​ ಫುಟ್​ಬಾಲ್​ ಟೂರ್ನಿಯಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅವರ ಅರ್ಜೆಂಟೀನಾ ಟೀಮ್​ಗೆ ಕೇರಳಿಗರು ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಟೂರ್ನಿಯಲ್ಲಿ ಅರ್ಜೆಂಟೀನಾ ವರ್ಲ್ಡ್​ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಕಾರಣದಿಂದಲೇ ಅವರು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಆ ತಂಡ ಭೇಟಿ ನೀಡುವುದನ್ನು ಈ ಹಿಂದೆಯೇ ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ಅವರು ಸ್ಪಷ್ಟ ಪಡಿಸಿದ್ದರು.

 

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!