ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ; ಬರೋಬ್ಬರಿ 431 ರನ್, ಮೂವರ ಶತಕ

AUS vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 431 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿದೆ. ಆರಂಭಿಕರಾದ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100), ಮತ್ತು ಕ್ಯಾಮರೂನ್ ಗ್ರೀನ್ (118) ಶತಕಗಳನ್ನು ಬಾರಿಸಿ ಆಸ್ಟ್ರೇಲಿಯಾ ತಂಡ ಈ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೊತ್ತವು ಆಸ್ಟ್ರೇಲಿಯಾದ ಎರಡನೇ ಅತ್ಯಧಿಕ ಏಕದಿನ ಸ್ಕೋರ್ ಆಗಿದ್ದು, 19 ವರ್ಷಗಳ ನಂತರ ದಕ್ಷಿಣ ಆಫ್ರಿಕಾ ವಿರುದ್ಧ ಈ ರೀತಿಯ ಅದ್ಭುತ ಸಾಧನೆ ಮಾಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ ಏಕದಿನ ಸರಣಿ ಸೋತು ಮುಜುಗರಕ್ಕೀಡಾಗಿದ್ದ ಆತಿಥೇಯ ಆಸ್ಟ್ರೇಲಿಯಾ ತಂಡ ಇದೀಗ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರನ್‌ಗಳ ಬೆಟ್ಟವನ್ನೇ ಕಟ್ಟಿದೆ. ಉಭಯ ತಂಡಗಳ ನಡುವಿನ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಬರೋಬ್ಬರಿ 431 ರನ್ ಕಲೆಹಾಕಿದೆ. ಇದು ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಕಲೆಹಾಕಿದ ಎರಡನೇ ಅತ್ಯಧಿಕ ಸ್ಕೋರ್ ಆಗಿದೆ. ತಂಡದ ಪರ ಆರಂಭಿಕರಾದ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಶತಕ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಬಂದ ಕ್ಯಾಮರೂನ್ ಗ್ರೀನ್ ಕೂಡ ಸ್ಫೋಟಕ ಶತಕ ಬಾರಿಸಿದರು. ಈ ಮೂವರ ಆಟದಿಂದಾಗಿ ಆಸೀಸ್ ಪಡೆ ಬೃಹತ್ ಮೊತ್ತವನ್ನು ಪೇರಿಸಿತು.

 

19 ವರ್ಷಗಳ ನಂತರ ಆಸೀಸ್ ಅಬ್ಬರ ವಾಸ್ತವವಾಗಿ ಇದೇ ದಕ್ಷಿಣ ಆಫ್ರಿಕಾ ವಿರುದ್ಧ 2006 ರಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 434 ರನ್​ಗಳ ಇನ್ನಿಂಗ್ಸ್ ಆಡಿತ್ತು. ಇದು ಏಕದಿನದಲ್ಲಿ ಆಸ್ಟ್ರೇಲಿಯಾ ಕಲೆಹಾಕಿರುವ ಅತ್ಯಧಿಕ ರನ್​ಗಳ ಇದುವರೆಗಿನ ದಾಖಲೆಯಾಗಿದೆ. ಇದೀಗ ಅಂದರೆ ಬರೋಬ್ಬರಿ 19 ವರ್ಷಗಳ ನಂತರ, ದಕ್ಷಿಣ ಆಫ್ರಿಕಾ ವಿರುದ್ಧ ಕಾಂಗರೂಗಳು ಮತ್ತೊಮ್ಮೆ ಏಕದಿನ ಪಂದ್ಯಗಳಲ್ಲಿ ಎರಡನೇ ಅತ್ಯಧಿಕ ಸ್ಕೋರ್‌ ದಾಖಲಿಸಿದ ಸ್ಕ್ರಿಪ್ಟ್ ಬರೆದಿದ್ದಾರೆ. 10 ವರ್ಷಗಳ ನಂತರ 400 ಕ್ಕೂ ಹೆಚ್ಚು ಸ್ಕೋರ್. ಇದು ಮಾತ್ರವಲ್ಲದೆ 10 ವರ್ಷಗಳ ಕಾಯುವಿಕೆಯ ನಂತರ ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್‌ನಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದೆ. ಇದಕ್ಕೂ ಮೊದಲು, 2015 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಕೊನೆಯ ಬಾರಿಗೆ ಏಕದಿನದಲ್ಲಿ 400 ರನ್‌ಗಳ ಗಡಿ ದಾಟಿತ್ತು. ಆಗ ಆಸ್ಟ್ರೇಲಿಯಾ 6 ವಿಕೆಟ್‌ಗಳಿಗೆ 417 ರನ್ ಗಳಿಸಿತ್ತು, ಇದು ಏಕದಿನದಲ್ಲಿ ಆಸೀಸ್ ಪಡೆಯ ಮೂರನೇ ಅತ್ಯಧಿಕ ಸ್ಕೋರ್ ಆಗಿದೆ. ಇದು ಮಾತ್ರವಲ್ಲದೆ ಏಕದಿನ ಕ್ರಿಕೆಟ್‌ನಲ್ಲಿ ಇದು 9 ನೇ ಅತ್ಯಧಿಕ ಸ್ಕೋರ್ ಆಗಿದೆ.

18 ಸಿಕ್ಸರ್‌, 431 ರನ್‌ಗಳು ಆಸೀಸ್ ಪರ ಟ್ರಾವಿಸ್ ಹೆಡ್ ಅತ್ಯಧಿಕ 142 ರನ್‌ ಬಾರಿಸಿದರೆ, ಮಿಚೆಲ್ ಮಾರ್ಷ್ ಕೂಡ 100 ರನ್‌ ಕಲೆ ಹಾಕಿದರು. ಮೂರನೇ ಕ್ರಮಾಂಕದಲ್ಲಿ ಬಂದ ಕ್ಯಾಮರೂನ್ ಗ್ರೀನ್ ಕೇವಲ 55 ಎಸೆತಗಳಲ್ಲಿ 118 ರನ್‌ ಬಾರಿಸಿ ತಂಡವನ್ನು ಈ ಬೃಹತ್ ಮೊತ್ತದತ್ತ ಕೊಂಡೊಯ್ದರು. ಆಸ್ಟ್ರೇಲಿಯಾದ ಇನ್ನಿಂಗ್ಸ್‌ನಲ್ಲಿ ಒಟ್ಟು 18 ಸಿಕ್ಸರ್‌ಗಳು ಸಿಡಿದವು. ಇವುಗಳಲ್ಲಿ ಹೆಡ್ ಮತ್ತು ಮಾರ್ಷ್ ತಲಾ 5 ಸಿಕ್ಸರ್‌ಗಳನ್ನು ಬಾರಿಸಿದರೆ, ಕ್ಯಾಮರೂನ್ ಗ್ರೀನ್ 8 ಸಿಕ್ಸರ್‌ಗಳನ್ನು ಬಾರಿಸಿದರು. 10 ವರ್ಷಗಳ ನಂತರ ಟಾಪ್ 3 ಶತಕ
10 ವರ್ಷಗಳಲ್ಲಿ ಟಾಪ್ ಮೂವರು ಬ್ಯಾಟ್ಸ್‌ಮನ್‌ಗಳು ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ್ದು ಇದೇ ಮೊದಲು. ಅಚ್ಚರಿಯೆಂದರೆ ದಕ್ಷಿಣ ಆಫ್ರಿಕಾದ ಟಾಪ್ ಮೂವರು ಬ್ಯಾಟ್ಸ್‌ಮನ್‌ಗಳು ಕೊನೆಯ ಬಾರಿಗೆ ಅಂದರೆ 2015 ರಂದು ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಆ ಸಮಯದಲ್ಲಿ ಆರಂಭಿಕರಾದ ಹಾಶಿಮ್ ಆಮ್ಲಾ, ರೈಲಿ ರುಸ್ಸೋ ಮತ್ತು ಎಬಿ ಡಿವಿಲಿಯರ್ಸ್ ಶತಕದ ಇನ್ನಿಂಗ್ಸ್ ಆಡಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!