ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !

ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.

ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, ‘ಕೆಜಿಎಫ್’ (KGF), ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.
ಬಣ್ಣದ ಲೋಕದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವ ಹೊಂದಿದ್ದರು. ‘ಕಾಂತಾರ’ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದರು. ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಟ ಮಂಗಳೂರು ದಿನೇಶ್​ ಮರಣ ಹೊಂದಿದ್ದಾರೆ.

ಮಂಗಳೂರು ದಿನೇಶ್ ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವುಂಟಾಗಿದೆ. ‘ಕಲಾ ನಿರ್ದೇಶಕ, ಕಲಾವಿದ, ನಿರ್ಮಾಪಕ, ಸನ್ಮಿತ್ರ ದಿನೇಶ್ ಮಂಗ್ಳುರ್ ಇನ್ನಿಲ್ಲ. ಹೋಗಿ ಬಾ ಮಿತ್ರಾ’ ಎಂದು ನಿರ್ದೇಶಕ ಪಿ. ಶೇಷಾದ್ರಿ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !