ಹೋಮ್ ವರ್ಕ್​ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?

ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.
ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್​ ವರ್ಕ್​​ ಒತ್ತಡದಿಂದ ಹೀಗೆ ಮಾಡಿಕೊಂಡಿದ್ದಾಳೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದಾಸನಪುರ ಗ್ರಾಮದ ನಿವಾಸಿ ರಾಮು ಮತ್ತು ಶೋಭ ದಂಪತಿಯ ಮಗಳು ಕುಸುಮ (15) ಜೀವ ಕಳೆದುಕೊಂಡವರು. ಮಾಕಳಿಯ ಸೃಷ್ಟಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಕುಸುಮ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.

ಹೋಮ್ ವರ್ಕ್ ಮಾಡಿಲ್ಲ ಅಂದರೆ ಟೀಚರ್ ಹೊಡೆಯುತ್ತಾರೆ ಎನ್ನುವ ಭಯ, ಶಾಲೆಗೆ ರಜೆ ಹಾಕಿದರೆ ಪೋಷಕರು ಬೈಯ್ಯುತ್ತಾರೆ ಎನ್ನುವ ಮನಸ್ಥಿತಿಯಲ್ಲಿ ಕುಸುಮ ಮನನೊಂದಿದ್ದಳು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾಳೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹ ಹಸ್ತಾಂತರ ಮಾಡಲಾಗಿದೆ.

ಸದ್ಯ ಈ ಸಂಬಂಧ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಎಲ್ಲಾ ಮಕ್ಕಳಿಗೂ ಒಂದೇ ರೀತಿ ಹೋಮ್ ವರ್ಕ್ ನೀಡಲಾಗಿದೆ. ಅವರ ಸಾವಿಗೆ ಬೇರೆ ಕಾರಣವೂ ಇರಬಹುದು. ಪೊಲೀಸರ ತನಿಖೆ ಬಳಿಕ ಸತ್ಯ ಹೊರ ಬರುತ್ತದೆ ಎಂದು ಘಟನೆ ಕುರಿತಂತೆ ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಅವರು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!