ಬಾಹ್ಯಾಕಾಶ ಯಾತ್ರೆ ನಂತರ ಮೊದಲ ಬಾರಿಗೆ ತವರಿಗೆ ಬಂದ ಶುಭಾಂಶು ಶುಕ್ಲಾ !

ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು.

ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ ಹಳೆಯ ಶಾಲೆ ಸಿಟಿ ಮಾಂಟೆಸ್ಸರಿಯ ವಿದ್ಯಾರ್ಥಿಗಳು ಸ್ವಾಗತಿಸಿದರು. ಇದೇ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬ್ರಜೇಶ್ ಪಾಠಕ್ ಗೌರಪೂರ್ವಕವಾಗಿ ಸ್ವಾಗತಿಸಿದರು. ನಿಲ್ದಾಣದಲ್ಲಿ ಶುಭಾಂಶು ಕುಟುಂಬಸ್ಥರು ಸೇರಿದಂತೆ ಲಕ್ನೋದ ಜನರು ಸಂಭ್ರಮದಲ್ಲಿ ವಿಜಯ ಘೋಷಣೆಗಳನ್ನು ಕೂಗಿದರು.

ಬಳಿಕ ಸಿಟಿ ಮಾಂಟೆಸ್ಸರಿ ಶಾಲೆಯ 63,000 ವಿದ್ಯಾರ್ಥಿಗಳು ವಿಮಾನ ನಿಲ್ದಾಣದಿಂದ ಜಿ20 ಚೌಕ್‌ವರೆಗೆ ವಿಜಯಯಾತ್ರೆ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಯುಪಿ ಡಿಸಿಎಂ ಪಾಠಕ್ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ನಮ್ಮೂರಿನ ಹೆಮ್ಮೆಯ ಪುತ್ರನನ್ನು ಸ್ವಾಗತಿಸಲು ನಮಗೆ ನಿಜಕ್ಕೂ ತುಂಬಾ ಹೆಮ್ಮೆ ಎನಿಸುತ್ತದೆ. ಶುಭಾಂಶು ಶುಕ್ಲಾ ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಮೂಲಕ ಶುಭಾಂಶು ಯುವಕರಿಗೆ ಸ್ಫೂರ್ತಿಯಾಗಲಿದ್ದಾರೆ ಎಂದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು