ಪ್ರೊಡಕ್ಷನ್ಸ್ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿ ಯಶ್ ತಾಯಿ ಪುಷ್ಪಾ

ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ತೆಲುಗು ಚಿತ್ರ ‘ಘಾಟಿ’ಯ ಕರ್ನಾಟಕ ವಿತರಣೆ ಹಕ್ಕು ಇವರ ಕೈ ಸೇರಿದೆ. ಪ್ರಧಾನ ಚಿತ್ರವಾಗಿರುವುದು ವಿಶೇಷ. ಭವಿಷ್ಯದಲ್ಲಿ ಇನ್ನೂ ಹಲವು ಭಾಷೆಯ ಚಿತ್ರಗಳನ್ನು ವಿತರಿಸುವ ಯೋಜನೆ ಅವರಿಗೆ ಇದೆ.

ನಟ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರದ ಮೂಲಕ ಅವರು ನಿರ್ಮಾಪಕಿ ಆಗಿದ್ದಾರೆ. ಈಗ ಪುಷ್ಪಾ ಅರುಣ್​ ಕುಮಾರ್ ಅವರು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. PA ಪ್ರೊಡಕ್ಷನ್ಸ್ ಮೂಲಕ ಅವರು ಸಿನಿಮಾ ಹಂಚಿಕೆ ಕೂಡ ಆರಂಭಿಸಿದ್ದಾರೆ. ಅದು ಮಹಿಳಾ ಪ್ರಧಾನ ಸಿನಿಮಾ ಮೂಲಕ ಅನ್ನೋದು ಮತ್ತೊಂದು ವಿಶೇಷ. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಚಿತ್ರವನ್ನು ಪುಷ್ಪಾ ಅವರು ಕನ್ನಡದಲ್ಲಿ ಹಂಚಿಕೆ ಮಾಡಲಿದ್ದಾರೆ.

ಪುಷ್ಪಾ ಅರುಣ್ ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಸಂದರ್ಶನಗಳನ್ನು ನೀಡಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಸಿನಿಮಾ ಹಂಚಿಕೆ ಕೂಡ ಮಾಡುತ್ತಿದ್ದಾರೆ. PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇಡೀ ರಾಜ್ಯಾದ್ಯಂತ ‘ಘಾಟಿ’ ಸಿನಿಮಾ ಹಂಚಿಕೆ ಮಾಡುತ್ತಿದ್ದಾರೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಇದನ್ನು ರಿಲೀಸ್ ಮಾಡುವ ಆಲೋಚನೆ ಅವರಿಗೆ ಇದೆ.

ಈ ಬಗ್ಗೆ ಪುಷ್ಪಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಫಾಟಿ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ಪಿಎ ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ’ ಎಂದು ಪುಷ್ಪಾ ಹೇಳಿದ್ದಾರೆ. ಅವರು ಹೊಸ ಹೆಜ್ಜೆ ಇಟ್ಟಿದ್ದಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಸಿನಿಮಾ ನಿರ್ಮಾಣಕ್ಕೆ ಬಂದಾಗ ಅನೇಕರು ಸಾಕಷ್ಟು ಪ್ರೀತಿ ತೋರಿಸಿದ್ದೀರಿ. ಅದೇ ಪ್ರೀತಿ ವಿತರಿಕಿಯಾದಾಗಲೂ ಇರಲಿ. ನಿಮ್ಮಲ್ಲೆ ಪ್ರೋತ್ಸಾಹ ಬೇಕು’ ಎಂದು ಪುಷ್ಪಾ ಅವರು ಹೇಳಿದ್ದಾರೆ. ಅವರು ಮೊದಲ ಹಂಚಿಕೆಯಲ್ಲಿ ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘ಘಾಟಿ’ ಸಿನಿಮಾ ತೆಲುಗು ಚಿತ್ರ. ಇದನ್ನು ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡುತ್ತಿದ್ದಾರೆ. ಅನುಷ್ಕಾ ಶೆಟ್ಟಿ, ವಿಕ್ರಮ್ ಪ್ರಭು ನಟಿಸುತ್ತಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 5ರಂದು ವಿಶ್ವಾದ್ಯಂತ ಬಿಡುಗಡೆ ಕಾಣಲಿದೆ. ಈ ಚಿತ್ರದ ಬಗ್ಗೆ ಅನುಷ್ಕಾ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!