ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. !

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ.

ಉದ್ಯಾನ ನಗರಿಯಲ್ಲೂ ಯಾವುದಕ್ಕೂ ಏನು ಕಡಿಮೆ ಇಲ್ಲದಂತೆ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಯುವಕರು ಪ್ರತಿಷ್ಠಾಪನೆ ಮಾಡುತ್ತಾರೆ. ಬೆಂಗಳೂರಿನ ದೊಡ್ಡ ಗಣೇಶ ದೇಗುಲದಲ್ಲಿ ಹಬ್ಬರ ಸಡಗರ ಕಳೆಗಟ್ಟಿದೆ.

ದೊಡ್ಡ ಗಣೇಶ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜೆ ಪುನಸ್ಕಾರ, ಹೋಮ ನಡೆಯುತ್ತಿದ್ದು, ಗಣೇಶನ ದರ್ಶನಕ್ಕೆ ಭಕ್ತರು ಬೆಳಗ್ಗೆಯಿಂದಲೇ ಕ್ಯೂನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಭಕ್ತರಿಗೆ ಪ್ರಸಾದ ನೀಡಲಾಗುತ್ತಿದೆ. ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ದೇವಾಲಯದಲ್ಲಿ ಪೂಜೆ ಸಂಬಂಧ ಕೆಲಸಗಳು, ದೇಗುಲದ ಅಲಂಕಾರ ಸೇರಿ ಎಲ್ಲವನ್ನು ಮಾಡಲಾಗಿತ್ತು.

ಇನ್ನು ಮಾರುಕಟ್ಟೆಗಳಲ್ಲಿ ಗಣೇಶನ ಮೂರ್ತಿ, ಹೂವು, ಹಣ್ಣುಗಳು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನಸಂದಣಿ ಹೆಚ್ಚಿದೆ, ನಗರಗಳಲ್ಲಿ ಸಂಚಾರ ದಟ್ಟಣೆಯೂ ಏರ್ಪಟ್ಟಿದೆ. ಕೆಲವೆಡೆ ಬೆಳಗಿನ ಜಾವಾ ತುಂತುರು ಮಳೆಯಾಗಿದ್ದು ಚಳಿ ಕೂಡ ಮೈಕೊರೆಯುತ್ತಿತ್ತು. ಹಬ್ಬವಾಗಿದ್ದರಿಂದ ಜನರು ಯಾವುದನ್ನೂ ಲೆಕ್ಕಿಸದೇ ವಿನಾಯಕನ ಪೂಜೆಗಳಲ್ಲಿ ತೊಡಗಿಕೊಳ್ಳುತ್ತಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!