ಸುಮುಖನ ವಿಸರ್ಜನೆಗೆ ಬೆಂಗಳೂರಲ್ಲಿ ಖಡಕ್ ರೂಲ್ಸ್.. !

ಇವತ್ತು ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕನ ಹಬ್ಬ. ಗಣೇಶನ ಕೂರಿಸಿ ಸಂಭ್ರಮಿಸುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್​ ನಿಯಮಗಳನ್ನ ಕೂಡ ಜಾರಿ ಮಾಡಿದೆ. ಅದ್ರಲ್ಲೂ ಪರಿಸರ ಸ್ನೇಹಿ ಗಣಪನ ಆಚರಣೆಗೆ ಕರೆ ಕೊಟ್ಟಿರುವ ಬಿಬಿಎಂಪಿ ನೀವು ಕೂರಿಸುವ ಗಣೇಶನನ್ನ ವಿಸರ್ಜನೆ ಮಾಡಿಸೋಕೆ ತಯಾರಾಗಿದೆ.
41 ಕೆರೆ-ಕಲ್ಯಾಣಿ ಹಾಗೂ 489 ಸಂಚಾರಿ ವಾಹನಗಳ ಸಿದ್ಧತೆ
ಗಣೇಶ ಮೂರ್ತಿ ವಿಸರ್ಜನೆಗಾಗಿ ಈಗಾಗಲೇ ಬಿಬಿಎಂಪಿ ಸಕಲ ತಯಾರಿ ಮಾಡಿಕೊಂಡಿದೆ. ಹೀಗಾಗಿ ಕೆರೆ, ಕಲ್ಯಾಣಿ, ಸಂಚಾರಿ ವಾಹನಗಳ ವ್ಯವಸ್ಥೆಯನ್ನ ಮಾಡಿಕೊಳ್ಳುತ್ತಿದೆ. ಯಡಿಯೂರು ಕೆರೆ ಅಂತೂ ಮದುವಣಗಿತ್ತಿ ಹಾಗೇ ಜಗಮಗಿಸುವ ಲೈಟ್ಸ್​ಗಳಿಂದ ಅಲಂಕೃತಗೊಂಡಿದೆ. ಇನ್ನ ಸ್ಯಾಂಕಿ ಟ್ಯಾಂಕ್, ಹಲಸೂರು ಕೆರೆ ಸೇರಿದಂತೆ ಒಟ್ಟು 41 ಕೆರೆಗಳು ಹಾಗೂ ತಾತ್ಕಾಲಿಕ ಕಲ್ಯಾಣಿಗಳನ್ನ ಗಣೇಶನ ವಿಸರ್ಜನೆಗೆ ವ್ಯವಸ್ಥೆಯನ್ನ ಮಾಡಿಕೊಳ್ಳಲಾಗಿದೆ.

ಸುಮುಖನ ವಿಸರ್ಜನೆಗೆ ತಯಾರಿ
ಒಟ್ಟು 489 ಸಂಚಾರಿ ವಾಹನ ಅಂದ್ರೆ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ
ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ
ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿಲ್ಲ ವಿನಾಯಕನ ವಿಸರ್ಜನೆಗೆ ಅವಕಾಶ
ಮೇಲ್ವಿಚಾರಣೆಗಾಗಿ ಬಿಬಿಎಂಪಿಯಿಂದ ನೋಡಲ್ ಅಧಿಕಾರಿಗಳ ನೇಮಕ
ನಾಗರಿಕರ ಮಾಹಿತಿಗಾಗಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಹೆಚ್ಚಿನ ವಿವರ ಲಭ್ಯ
ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕವೂ ಮಾಹಿತಿ ಪಡೆಯಲು ಅವಕಾಶ
2025ರ ಆಗಸ್ಟ್ 27 ಅಂದ್ರೆ ಇವತ್ತಿನಿಂದ ಸೆಪ್ಟೆಂಬರ್ 17ರವರೆಗೆ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಇಲ್ಲಿ ವಿಸರ್ಜನೆ ಮಾಡಿಕೊಳ್ಳಬಹುದು. ಒಟ್ನಲ್ಲಿ ಗಣೇಶ ಹಬ್ಬಕ್ಕೆ ಬೇಕಾದ ಎಲ್ಲಾ ತಯಾರಿಗಳು ಬಿರುಸಿನಿಂದ ಸಾಗುತಿದ್ದು. ಇನ್ನೇನೇ ಇದ್ರೂ ಗಣೇಶನನ್ನ ಕೂರಿಸಿ ಹಬ್ಬ ಆಚರಿಸೋದೊಂದೇ ಬಾಕಿ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು