
ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ, ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.

ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು ಅನುಶ್ರೀ ಹಾಗೂ ರೋಷನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.





