ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌. ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!