ಲೋಕಾಯುಕ್ತ ವಿಚಾರಣೆಯಲ್ಲಿ ನಟಿ ರಾಧಿಕಾ ಹೇಳಿದ್ದೇನು?

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರಿಂದ ಹೇಳಿಕೆ ದಾಖಲಿಸಿದ್ದಾರೆ.

ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ್ದಾರೆ. ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿದೆ. ಹಣಕಾಸು ವ್ಯವಹಾರ ಬಗ್ಗೆ ಲೋಕಾಯುಕ್ತ ತನಿಖೆ ವೇಳೆ ಇದು ಬೆಳಕಿಗೆ ಬಂದಿದೆ.

 

ಈ ಬಗ್ಗೆ ವಿವರಣೆ ನೀಡುವಂತೆ ಲೋಕಾಯುಕ್ತ ಪೊಲೀಸರು ರಾಧಿಕಾ ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಹಿನ್ನಲೆಯಲ್ಲಿ ಕಳೆದ ತಿಂಗಳು ರಾಧಿಕಾ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಹಣ ನೀಡಿದ ಬಗ್ಗೆ ಸೂಕ್ತ ದಾಖಲೆಗಳನ್ನ ಒದಗಿಸಲು ಸೂಚನೆ ನೀಡಲಾಗಿತ್ತು. ಈ ವೇಳೆ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿ ಬಳಿ‌ ರಾಧಿಕಾ ಹೇಳಿಕೆ ದಾಖಲಿಸಲಾಗಿದೆ. ಯಶ್ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದ ರಾಧಿಕಾ, ಈ ವೇಳೆ ಜಮೀರ್ ಅಹ್ಮದ್ ಖಾನ್​ ಜೊತೆಗೆ ಹಣಕಾಸು ವ್ಯವಹಾರ ನಡೆಸಿರುವುದು ಪತ್ತೆ ಆಗಿತ್ತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!