ಆಗಸ್ಟ್ 26 ರಿಂದ ಜಮ್ಮುಕಾಶ್ಮೀರದಲ್ಲಿ ರಣಭೀಕರ ಮಳೆ.. ಈ ಪ್ರದೇಶಗಳ ನಡುವಿನ 68 ರೈಲುಗಳ ಸಂಚಾರ ರದ್ದು..!

ಶ್ರೀನಗರದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಯಲ್ಲಿ ಜಮ್ಮು ಮತ್ತು ಕತ್ರಾ ರೈಲ್ವೆ ಸ್ಟೇಷನ್​ಗಳಿಂದ ಹೊರಡುವ ಹಾಗೂ ಒಳ ಬರುವಂತಹ 68 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ಭಾರತದ ರೈಲ್ವೆ ಇಲಾಖೆ ಹೇಳಿದೆ. ಸೆಪ್ಟೆಂಬರ್ 30ರ ವರೆಗೆ ರೈಲುಗಳ ಸಂಚಾರ ಕ್ಯಾನ್ಸಲ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಜಮ್ಮು ಮತ್ತು ಕತ್ರಾ ರೈಲ್ವೆ ಸ್ಟೇಷನ್​ಗಳಿಂದ ಹೊರಡುವ ಹಾಗೂ ಒಳ ಬರುವ 68 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಇದರ ಜೊತೆಗೆ 24 ರೈಲುಗಳನ್ನು ಪುನಾರಂಭಿಸಲಾಗಿದೆ. ಜೋರಾದ ಮಳೆ ಹಾಗೂ ಹಠಾತ್ ಪ್ರವಾಹಗಳಿಂದ ರೈಲುಗಳ ಸಂಚಾರ ವೇಳಾಪಟ್ಟಿ ಜೋಡಣೆಯಾಗುತ್ತಿಲ್ಲ. ಹೀಗಾಗಿ ಕಳೆದ 8 ದಿನಗಳಿಂದ ಪಠಣ್​ಕೋಟ್ ಹಾಗೂ ಜಮ್ಮು ವಿಭಾಗದ ಕೆಲವು ಪ್ರದೇಶಗಳ ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ಹೇಳಿದೆ.

ಜಮ್ಮುಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾದ ಮಳೆಯಾಗುತ್ತಿದೆ. ಈಗಾಗಲೇ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಯಾಗಿದೆ. ಕೆಲವೊಂದು ಕಡೆ ಜೀವ ಹಾನಿ ಕೂಡ ಆಗಿದೆ. ಸೇತುವೆ, ಬ್ರಿಡ್ಜ್​ಗಳು, ರೈಲು ಹಳಿಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಮೊದಲೇ ಕಣಿವೆ ಪ್ರದೇಶವಾಗಿದ್ದರಿಂದ ಸ್ಥಳೀಯರ ಸಂಚಾರಕ್ಕೆ ಹೆಚ್ಚು ಅನಾನುಕೂಲ ಆಗಿದೆ. ಇನ್ನು ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೈಲುಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ನಿಷೇಧ ಮಾಡಲಾಗಿದೆ.

ಆಗಸ್ಟ್ 26 ರಿಂದ ಜಮ್ಮುಕಾಶ್ಮೀರದಲ್ಲಿ ರಣಭೀಕರವಾದ ಮಳೆಯಾಗುತ್ತಿದ್ದು ಜನರು, ಯಾತ್ರಿಕರು, ಕಾರ್ಮಿಕರು ಎಲ್ಲರು ಸಮಸ್ಯೆಗೆ ಸಿಲುಕಿದ್ದಾರೆ. ಮಾತಾ ವೈಷ್ಣೋ ದೇವಿ ಯಾತ್ರಿಕರ ಮೇಲೆ ಗುಡ್ಡ ಕುಸಿದು 34 ಜನರು ಜೀವ ಕಳೆದುಕೊಂಡಿದ್ದರು. ಧಾರಾಕಾರ ಮಳೆಯಿಂದ ಭೂಕುಸಿ, ಪ್ರವಾಹ, ಬೆಟ್ಟಗಳು ಕುಸಿದು ಬೀಳುವಂತಹ ಘಟನೆಗಳು ನಡೆಯುತ್ತಿವೆ. ಇದರಿಂದ ಹಲವೆಡೆ ರೈಲು ಹಳಿಗಳಿಗೂ ಹಾನಿಯಾಗಿದೆ. ಈ ಎಲ್ಲ ದೃಷ್ಟಿಯಲ್ಲಿಟ್ಟುಕೊಂಡು ಸೆಪ್ಟೆಂಬರ್ 30ರ ವರೆಗೆ 68 ರೈಲುಗಳನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

Related Posts

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ

ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ. ಬೆಂಗಳೂರು, ಜುಲೈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!