ಮದ್ದೂರಿನಲ್ಲಿ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ

ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಶಾಂತಿ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ ಜಪಿಸಿದ್ದಾರೆ.ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಇನ್ನು, ಶಾಂತಿ ಸಭೆ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ ಜಪಿಸಿದ್ದಾರೆ. ಮದ್ದೂರು ಗಲಾಟೆ ವಿಪಕ್ಷಗಳಿಗೆ ಅಸ್ತ್ರ ಸಿಕ್ಕಿದ್ದು ಸರ್ಕಾರದ ವಿರುದ್ಧ ರಾಜಕೀಯ ಸಮರಾಸ್ತ್ರ ಪ್ರಯೋಗಿಸ್ತಿದೆ. ನಿನ್ನೆ ಮದ್ದೂರಿನಲ್ಲಿ ಶಾಂತಿ ಸಭೆ ನಡೆಸಿದ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಘಟನೆ ನಡೆದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ ತಪ್ಪಿತಸ್ಥರು ಯಾರೇ ಇದ್ರೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದಿದ್ದಾರೆ.

ಇವತ್ತು 28 ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ಈ ಮಧ್ಯೆ ಇವತ್ತು ಮದ್ದೂರು ಪಟ್ಟಣದಲ್ಲಿ 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ಇದ್ದು, 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸ್ತಿದ್ದಾರೆ. ಹೀಗಾಗಿ ಬೂದಿಮುಚ್ಚಿದ ಕೆಂಡ ಮತ್ತೆ ಸ್ಫೋಟಿಸುವ ಆತಂಕ ಪೊಲೀಸರಿಗೆ ಕಾಡ್ತಿದೆ. ಗಣಪತಿ ವಿಸರ್ಜನೆ ವೇಳೆ ಶಾಂತಿ ಕಾಪಾಡುವಂತೆ ಸಚಿವ ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ , ಹಿಂದುಗಳ ಮೇಲೆ ಲಾಠಿ ಚಾರ್ಜ್ ಮೂಲಕ ಓಲೈಕೆ ರಾಜಕಾರಣ ಮಾಡ್ತಿದೆ ಅಂತ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಒಟ್ಟಾರೆ, ಶಾಂತಿಯಿಂದ ನಡೀಬೇಕಿದ್ದ ಗಣೇಶೋತ್ಸವ ಗಲಾಟೆ ಸ್ವರೂಪಕ್ಕೆ ತಿರುಗಿರೋದು ಒಳ್ಳೆಯ ಬೆಳವಣಿಗೆ ಅಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!