2026ರ ಏಷ್ಯನ್ ಕ್ರೀಡಾಕೂಟ; ಭಾರತ ಪುರುಷರ ಫುಟ್ಬಾಲ್ ತಂಡಕ್ಕಿಲ್ಲ ಅವಕಾಶ?

ನವದೆಹಲಿ: 2026ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತ ಪುರುಷರ ಫುಟ್ಬಾಲ್ ತಂಡವನ್ನು ಕಳುಹಿಸುವ ಸಾಧ್ಯತೆ ಕಡಿಮೆಯಾಗಿದೆ. ಆದರೆ ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಲ್ಲಿರುವ ಮಹಿಳಾ ಫುಟ್ಬಾಲ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಸೂಚಿಸುತ್ತವೆ.

ಈ ನಿರ್ಧಾರಕ್ಕೆ ಕಾರಣವಾಗಿ ಕೇಂದ್ರ ಕ್ರೀಡಾ ಸಚಿವಾಲಯದಿಂದ ಕ್ರೀಡಾಪಟುಗಳ ಆಯ್ಕೆ ಮಾನದಂಡಗಳಲ್ಲಿ ತಂದಿರುವ ಬದಲಾವಣೆಗಳನ್ನು ಹೇಳಬಹುದು. ಮುಂದಿನ ಏಷ್ಯನ್ ಗೇಮ್ಸ್‌ಗಳಿಗೆ ಸರ್ಕಾರವು ಕೇವಲ ಪದಕ ಗೆಲ್ಲುವ ಸಾಮರ್ಥ್ಯವಿರುವ ಕ್ರೀಡಾಪಟುಗಳನ್ನಷ್ಟೇ ಆಯ್ಕೆ ಮಾಡಲಿದೆ ಎಂಬುದು ಸ್ಪಷ್ಟವಾಗಿದೆ.

2024ರಲ್ಲಿ ಕತಾರ್‌ನಲ್ಲಿ ನಡೆದ ಏಷ್ಯನ್ ಕಪ್‌ನಲ್ಲಿ ಪುರುಷರ ತಂಡವು ಗುಂಪು ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರಸ್ತುತ ಈ ತಂಡವು ಏಷ್ಯಾದಲ್ಲಿ 24ನೇ ಸ್ಥಾನದಲ್ಲಿದೆ ಹಾಗೂ ವಿಶ್ವದಲ್ಲಿ 134ನೇ ಸ್ಥಾನದಲ್ಲಿದೆ. ಈ ಹಿಂದಿನ ಸಾಧನೆಗಳನ್ನು ನೋಡಿದರೂ ಕೂಡಾ, 1951 ಮತ್ತು 1962ರಲ್ಲಿ ಚಿನ್ನದ ಪದಕ, 1970ರಲ್ಲಿ ಕಂಚಿನ ಪದಕ, ಹಾಗೂ 1982ರಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದೇ ಅವರ ಪ್ರಮುಖ ಸಾಧನೆ. ಆ ಬಳಿಕದಿಂದ ತಂಡ ನಿರಂತರ ನಿರ್ವಹಣೆಯಲ್ಲೂ ಹಾಗೂ ಸಾಧನೆಲ್ಲೂ ಕುಗ್ಗಿ ಹೋಗಿದೆ.

ಇದೇ ವೇಳೆ, ಭಾರತೀಯ ಮಹಿಳಾ ಫುಟ್ಬಾಲ್ ತಂಡವು ಏಷ್ಯಾದಲ್ಲಿ 12ನೇ ಸ್ಥಾನದಲ್ಲಿದ್ದು, ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಿದೆ. ಆದ್ದರಿಂದ, ಅವರನ್ನೇ ಕ್ರೀಡಾಕೂಟಕ್ಕೆ ಕಳುಹಿಸುವ ಅವಕಾಶ ಅಧಿಕವಾಗಿದೆ.

ಬುಧವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯ, ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಬೇಕಾದ ತಂಡ ಅಥವಾ ಆಟಗಾರನು/ಆಟಗಾರ್ತಿಯು, ತಂಡ ಸ್ಪರ್ಧೆಗಳಿಗಾಗಿ ಏಷ್ಯಾದ ಅಗ್ರ-8 ಸ್ಥಾನದಲ್ಲಿರಬೇಕು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಅಗ್ರ-6 ಸ್ಥಾನದಲ್ಲಿರಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ.

ಇದೇ ವೇಳೆ, ಕಾಮನ್‌ವೆಲ್ತ್ ಕ್ರೀಡಾಕೂಟ, ಪ್ಯಾರಾ ಏಷ್ಯನ್ ಗೇಮ್ಸ್, ಏಷ್ಯನ್ ಒಳಂಗಾಣ ಕ್ರೀಡಾಕೂಟ, ಬೀಚ್ ಗೇಮ್ಸ್, ಯುವ ಒಲಿಂಪಿಕ್ಸ್ ಹಾಗೂ ಏಷ್ಯನ್ ಯುವ ಕ್ರೀಡಾಕೂಟಗಳಲ್ಲಿ ತೋರಿದ ಪ್ರದರ್ಶನವನ್ನೂ ಆಯ್ಕೆ ಮಾನದಂಡವಾಗಿ ಪರಿಗಣಿಸಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!